ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ: 21 ಪ್ರಕರಣ ದಾಖಲು
ಮಂಗಳೂರು : ಸಾರ್ವನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಹೆಚಾಗ್ಚಿದು, ಆ ಕಾರಣದಿಂದ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ತಂಡವು ಆಗಸ್ಟ್ 20 ರಂದು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಉಲ್ಲಂಘನೆ ವಿರುದ್ಧ ಉರ್ವಸ್ಟೋರ್ ಪರಿಸರದಲ್ಲಿ ಕಾರ್ಯಚರಣೆ ನಡೆಸಿ 21 ಕೇಸ್ ದಾಖಲಿಸಿ ಸುಮಾರು ರೂ. 2100 ದಂಡ ವಿಧಿಸಲಾಯಿತು. ಕಾಯಿದೆ ಕುರಿತಂತೆ ಅಂಗಡಿ ಹಾಗೂ ಹೋಟೇಲ್ ಮಾಲೀಕರಿಗೆ ಮಾಹಿತಿ ನೀಡಲಾಯಿತು.
ಈ ತಂಡದಲ್ಲಿ ಹಿರಿಯ ಆಹಾರ ಸುರಕ್ಷತಾಧಿಕಾರಿ ರಾಜು, ಸಮಾಜ ಕಾರ್ಯಕರ್ತರಾದ ಶ್ರುತಿ ಸಾಲ್ಯಾನ್, ವಿಜಯ್ ಕುಮಾರ್, ಉರ್ವ ಸ್ಟೋರ್ ಠಾಣಾ ಪೊಲೀಸ್ ಸಿಬ್ಬಂದಿ ಪ್ರತಾಪ್, ವಿದ್ಯಾ ಮತ್ತಿತರು ಉಪಸ್ಥಿತರಿದ್ದರು.