ಸಿಎಂ ಕನಸು ಭಗ್ನ: ಶಶಿಕಲಾಗೆ 4 ವರ್ಷ ಜೈಲು, 10 ಕೋಟಿ ರೂಪಾಯಿ ದಂಡ

Spread the love

ಸಿಎಂ ಕನಸು ಭಗ್ನ: ಶಶಿಕಲಾಗೆ 4 ವರ್ಷ ಜೈಲು, 10 ಕೋಟಿ ರೂಪಾಯಿ ದಂಡ

ನವದೆಹಲಿ: ವಿ.ಕೆ. ಶಶಿಕಲಾ ನಟರಾಜನ್‌ ಅವರ ತಮಿಳುನಾಡಿನ ಮುಖ್ಯಮಂತ್ರಿಯಾಗುವ ಕನಸು ಭಗ್ನಗೊಂಡಿದ್ದು ಆಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಶಿಕಲಾ ನಟರಾಜನ್ ದೋಷಿ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಪಿ.ಸಿ. ಘೋಷ್ ಮತ್ತು ಅಮಿತಾವ ರಾಯ್ ಅವರಿದ್ದ ವಿಭಾಗೀಯ ಪೀಠ ಬೆಳಿಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಿತ್ತು.

ಶಶಿಕಲಾ ನಟರಾಜನ್ ಅವರಿಗೆ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 10 ಕೋಟಿ ರೂಪಾಯಿ ದಂಡ ಹಾಕಲಾಗಿದೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಇವರನ್ನು ದೋಷಮುಕ್ತಗೊಳಿಸಿ ಕರ್ನಾಟಕ ಹೈಕೋರ್ಟ್‌ 2015ರಲ್ಲಿ ಆದೇಶ ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಜಯಲಲಿತಾ ಸಾವಿನ ನಂತರ, ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿರುವ ಶಶಿಕಲಾ ಅವರು ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲು ಅವಕಾಶ ಕೋರಿದ್ದರು. ಸುಪ್ರೀಂ ಕೋರ್ಟ್‌ನ ಈ ತೀರ್ಪಿನಿಂದಾಗಿ ಶಶಿಕಲಾ ಅವರ ಕನಸು ಭಗ್ನಗೊಂಡಿದೆ.

ರೂ. 66.65 ಕೋಟಿ ಮೊತ್ತದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಶಿಕಲಾ ಸಂಬಂಧಿ ಇಳವರಸಿ ಮತ್ತು ಸುಧಾಕರನ್ ಸಹ ಅಪರಾಧಿಗಳು ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ.


Spread the love