Home Mangalorean News Kannada News ಸಿದ್ದರಾಮಯ್ಯ ಪ್ರತಿಕೃತಿಗೆ ಚಪ್ಪಲಿ ಏಟು: ಶಾಸಕ ಯಶ್ಪಾಲ್ ಸಹಿತ ಹಲವರ ವಿರುದ್ದ ಪ್ರಕರಣ ದಾಖಲು

ಸಿದ್ದರಾಮಯ್ಯ ಪ್ರತಿಕೃತಿಗೆ ಚಪ್ಪಲಿ ಏಟು: ಶಾಸಕ ಯಶ್ಪಾಲ್ ಸಹಿತ ಹಲವರ ವಿರುದ್ದ ಪ್ರಕರಣ ದಾಖಲು

Spread the love

ಸಿದ್ದರಾಮಯ್ಯ ಪ್ರತಿಕೃತಿಗೆ ಚಪ್ಪಲಿ ಏಟು: ಶಾಸಕ ಯಶ್ಪಾಲ್ ಸಹಿತ ಹಲವರ ವಿರುದ್ದ ಪ್ರಕರಣ ದಾಖಲು

ಉಡುಪಿ: ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಹಿತ ಹಲವರ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ ಚಾರ ನಿವಾಸಿ ಸೌರಭ್ ಬಲ್ಲಾಳ್ ಅವರು ದೂರು ನೀಡಿದ್ದು ಅವರ ದೂರಿನ ಆಧಾರದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಮಹಿಳಾ ಮೋರ್ಚಾದ ವೀಣಾ ಶೆಟ್ಟಿ, ಇತರ ನಾಯಕರಾದ ಅಭಿರಾಜ್ ಸುವರ್ಣ, ಅಜಿತ್ ಮಲ್ಪೆ, ವಿಖ್ಯಾತ್ ಶೆಟ್ಟಿ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಾಗಿದೆ.

ಸಪ್ಟೆಂಬರ್ 6ರಂದು ಸಂಜೆ ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಬಿಜೆಪಿ ಪಕ್ಷದ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ದ ಪ್ರತಿಭಟನೆ ಮಾಡಿದ್ದು ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಗಿರೀಶ್ ಅಂಚನ್ ಹಾಗೂ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿಯವರು ಚಪ್ಪಲಿಯಿಂದ ಹೊಡೆದಿರುತ್ತಾರೆ. ಅಲ್ಲದೆ ಅಭಿರಾಜ್ ಕೈಯಲ್ಲಿ ಪೆಟ್ರೋಲ್ ಬಾಟಲಿ ಹಿಡಿದು ಪ್ರತಿಕೃತಿಗೆ ಬೆಂಕಿ ಹಚ್ಚಿ ಆರೋಪಿತರುಗಳು ಗುಂಪುಗಳ ನಡುವೆ ದ್ವೇಷ, ಅಸೂಯೆ ಉಂಟಾಗುವಂತೆ ಮಾಡಿ, ಶಾಂತಿ ಭಂಗ ತರುವ ಉದ್ದೇಶದಿಂದ ಮುಖ್ಯಮಂತ್ರಿರವರನ್ನು ಅವಮಾನಿಸಿದ್ದಲ್ಲದೇ ಉದ್ದೇಶಪೂರ್ವಕವಾಗಿ ಒಂದು ವರ್ಗವನ್ನು ಪ್ರಚೋದಿಸುವ ಸಂಭವ ಇದೆಯೆಂದು ತಿಳಿದು ಕೂಡಾ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡಿ ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗಿದ್ದು ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಸೌರಭ್ ಬಲ್ಲಾಳ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಅವರ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 219-2024 ಕಲಂ: 192, 196(1), 352, 353(1)(c) BNS 2023 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version