Home Mangalorean News Kannada News ಸಿದ್ದರಾಮಯ್ಯ ಸರಕಾರ ಹಿಂದುಳಿದ ವರ್ಗಕ್ಕೆ ಗರಿಷ್ಠ ಅನುದಾನ ನೀಡಿದೆ; ಪ್ರಮೋದ್ ಮಧ್ವರಾಜ್

ಸಿದ್ದರಾಮಯ್ಯ ಸರಕಾರ ಹಿಂದುಳಿದ ವರ್ಗಕ್ಕೆ ಗರಿಷ್ಠ ಅನುದಾನ ನೀಡಿದೆ; ಪ್ರಮೋದ್ ಮಧ್ವರಾಜ್

Spread the love

ಸಿದ್ದರಾಮಯ್ಯ ಸರಕಾರ ಹಿಂದುಳಿದ ವರ್ಗಕ್ಕೆ ಗರಿಷ್ಠ ಅನುದಾನ ನೀಡಿದೆ; ಪ್ರಮೋದ್ ಮಧ್ವರಾಜ್

ಉಡುಪಿ: ಹಿಂದುಳಿದ ವರ್ಗದ ಸಮಾಜ ದೇಶದ ಶಕ್ತಿ. ಅವರಿಗೆ ರಾಜಕೀಯ ಶಕ್ತಿಯನ್ನು ಒದಗಿಸಿರುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಬನ್ನಂಜೆಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರಿಗೆ ಮುಖ್ಯಮಂತ್ರಿ ಪದವಿ ನೀಡಿದ ಪಕ್ಷ ಕಾಂಗ್ರೆಸ್. ಬೇರೆ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೆ ಇತರ ವರ್ಗದವರು ಮುಖ್ಯಮಂತ್ರಿ ಆಗುತ್ತಾರೆ. ಈಗಿನ ಸಿದ್ದರಾಮಯ್ಯ ಸರಕಾರ ಹಿಂದುಳಿದ ವರ್ಗದ ಕಲ್ಯಾಣಕ್ಕೆ ಗರಿಷ್ಠ ಅನುದಾನ ಮಂಜೂರು ಮಾಡಿದೆ. ಸಮುದಾಯ ಭವನ ಸಮಾಜದ ಶಕ್ತಿ. ಹೀಗಾಗಿ ಅವುಗಳ ನಿರ್ಮಾಣಕ್ಕೆ ಆದ್ಯತೆ ನೀಡಿದೆ. ಉಡುಪಿ ವಿದಾನ ಸಬಾ ಕ್ಷೇತ್ರದ ಪ್ರತಿ ಬೂತ್‍ನಲ್ಲಿ ಹಿಂದುಳಿದ ವರ್ಗದ ಘಟಕ ರಚಿಸಲಾಗಿದೆ. ಈ ಕೆಲಸ ರಾಜ್ಯಾದ್ಯಂತ ನಡೆಯಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹಿಂದುಳಿದ ವರ್ಗಗಳ ಜಿಲ್ಲಾ ಉಸ್ತುವಾರಿ ಪ್ರಖ್ಯಾತ್ ಶೆಟ್ಟಿ ಅವರು ಇಂದು ರಾಜ್ಯದಲ್ಲಿ ನಡೆದ ಕೋಮುಗಲಭೆಗಳಲ್ಲಿ ಹಿಂದುಳಿದ ಸಮುದಾಯಗಳೇ ಹೆಚ್ಚು ತಮ್ಮ ಜೀವಗಳನ್ನು ಕಳೆದುಕೊಳ್ಳುತ್ತಿದ್ದು ಈ ಕುರಿತು ಹಿಂದುಳಿದ ಸಮುದಾಯದ ಯುವಕರು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಹಿಂದುಳಿದ ವರ್ಗಗಳಿಂದ ಬಂದ ಬಿಜೆಪಿ ಸಂಸದ ಶ್ರೀರಾಮುಲು ಸಿದ್ದರಾಮಯ್ಯ ಸರಕಾರದ ವಿರುದ್ದ ಕೀಳಾಗಿ ಮಾತನಾಡುತ್ತಿದ್ದು ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ಕಾಂಗ್ರೆಸಿಗರನ್ನು ಜೈಲಿಗೆ ಕಳುಹಿಸುವುದಾಗಿ ಬಾಲಿಶ ಹೇಳಿಕೆ ನೀಡುತ್ತಿರುವುದು ಖಂಡನೀಯ. ಇವರದ್ದೇ ಬಿಜೆಪಿ ಆಡಳಿತವಿದ್ದಾಗ ಜನಾರ್ದನ ರೆಡ್ಡಿಯನ್ನು ಯಾವ ಕಾರಣಕ್ಕಾಗಿ ಜೈಲಿನಿಂದ ಹೊರಗಡೆ ತರಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.

ಕಾರ್ಕಳದ ಮಾಜಿ  ಗೋಪಾಲ ಭಂಡಾರಿ, ಕಾಂಗ್ರೆಸ್ ವಕ್ತಾರ ಹರ್ಷ ಮೊೈಲಿ, ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ವೆಂಕಟ ಸುಬ್ಬಯ್ಯ, ಬೆಂಗಳೂರು ನಗರ ಕಾಂಗ್ರೆಸ್ ಅಧ್ಯಕ್ಷ ರಾಜಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ನಗರಾಭಿವೃದ್ಧಿ ಪ್ರಾ.ಅಧ್ಯಕ್ಷ ಬಿ. ನರಸಿಂಹ ಮೂರ್ತಿ, ನಗರಸಭಾ ಅದ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಶೋಕ್ ಕುಮಾರ್ ಕೊಡವೂರು, ಜಯಶ್ರೀ ಕೃಷ್ನರಾಜ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಹಿಂ.ವ. ಜಿಲ್ಲಾಧ್ಯಕ್ಷ ಯತೀಶ್ ಕರ್ಕೇರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version