ಸಿ.ಇ.ಟಿ ಅರಿವು ಸಾಲ:- ಅಲ್ಪ ಸಂಖ್ಯಾತರಿಂದ ಅರ್ಜಿ ಆಹ್ವಾನ
ಮ0ಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ 2017-18ನೇ ಸಾಲಿನ ಅರಿವು ಶಿಕ್ಷಣ ಸಾಲ ಯೋಜನೆಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಬುದ್ಧ) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2017-18ನೇ ಸಾಲಿನಲ್ಲಿ ಸಿಇಟಿ/ಪಿಜಿಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಹಾಗೂ ಸರ್ಕಾರದಿಂದ ಅಂಗೀಕೃತಗೊಂಡ 2 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಹಾಗೂ ಪಿ.ಹೆಚ್.ಡಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರಿವು ಸಾಲ ಯೋಜನೆಯಡಿ ಶೇ. 2ರ ಸೇವಾ ಶುಲ್ಕದೊಂದಿಗೆ ರೂ. 75,000ವರೆರೆಗಿನ ಸಾಲಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಬಗ್ಗೆ ನಿಗಮದ ವೆಬ್ ಸೈಟ್ ನ್ನು ತೆರೆದು ಸಿಇಟಿ ಅಥವಾ ನಾನ್ ಸಿಇಟಿ ವಿದ್ಯಾರ್ಥಿಗಳು ತಮಗೆ ಅನ್ವಯಿಸುವ ಲಿಂಕ್ಗೆ ಕ್ಲಿಕ್ ಮಾಡಿ ನಂತರ ಅರ್ಜಿಯನ್ನು ಭರ್ತಿ ಮಾಡಿದ ಕೂಡಲೇ ಅಂತಹ ವಿದ್ಯಾರ್ಥಿಗಳು ಕ್ಯೂ.ಆರ್ ಕೋಡ್ ಮುದ್ರಣಗೊಂಡ ಅರ್ಜಿಯ ಪ್ರಿಂಟ್ಔಟ್ನ್ನು ತೆಗೆದುಕೊಂಡು ಅದರಲ್ಲಿ ತಿಳಿಸಿದ ದಾಖಲಾತಿಗಳೊಂದಿಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಅಂತಹ ವಿದ್ಯಾರ್ಥಿಗಳು ಭರಿಸಬೇಕಾದ ಭೋಧನಾ ಶುಲ್ಕಕ್ಕಾಗಿ ನಿಗಮದಿಂದ ಮಂಜೂರು ಮಾಡುವ ಸಾಲವನ್ನು ಅವರು ವ್ಯಾಸಂಗ ಮಾಡುವ ಕಾಲೇಜಿಗೆ ನೇರವಾಗಿ ಪಾವತಿ ಮಾಡಲಾಗುವುದು.
ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, 2ನೇ ಮಹಡಿ, ಮೌಲಾನಾ ಆಝೂದ್ ಅಲ್ಪಸಂಖ್ಯಾತರ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.