ಸುಂಟರಗಾಳಿಯಿಂದ 3 ಮನೆಗಳಿಗೆ ಹಾನಿ: ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಯಶ್ಪಾಲ್ ಸುವರ್ಣ
ಉಡುಪಿ: ನಗರಸಭೆಯ ಮೂಡಬೆಟ್ಟು ವಾರ್ಡಿನಲ್ಲಿ ಸೋಮವಾರ ಸಂಜೆ ಸುರಿದ ಮಳೆ ಹಾಗೂ ಸುಂಟರಗಾಳಿಯಿಂದ ಭಾರೀ ಗಾತ್ರದ ಮರ 3 ಮನೆಗಳ ಮೇಲೆ ಬಿದ್ದು ಅಪಾರ ಪ್ರಮಾಣದ ಹಾನಿ ಉಂಟಾದ ಬಗ್ಗೆ ಮಾಹಿತಿ ತಿಳಿದು ತಕ್ಷಣ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶೀಘ್ರ ಗತಿಯಲ್ಲಿ ತೆರವು ಕಾರ್ಯಾಚರಣೆ ನಡೆಸುವಂತೆ ಅಗ್ನಿಶಾಮಕ ದಳ, ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ, ಉಡುಪಿ ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸಂತ್ರಸ್ತ ಕುಟುಂಬಗಳಿಗೆ ಪ್ರಾಕೃತಿಕ ವಿಕೋಪದಡಿ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸುವಂತೆ ಹಾಗೂ ತಾತ್ಕಾಲಿಕವಾಗಿ ಆಶ್ರಯ ಒದಗಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಶ್ರೀಶ ಭಟ್, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.