Home Mangalorean News Kannada News ಸುಧೀರ್ ಕುಮಾರ್ ರೆಡ್ಡಿ ದಕ ಜಿಲ್ಲಾ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕಾರ

ಸುಧೀರ್ ಕುಮಾರ್ ರೆಡ್ಡಿ ದಕ ಜಿಲ್ಲಾ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕಾರ

Spread the love

ಸುಧೀರ್ ಕುಮಾರ್ ರೆಡ್ಡಿ ದಕ ಜಿಲ್ಲಾ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೋಲಿಸ್ ವರಿಷ್ಠಾಧಿಕಾರಿಯಾಗಿ ಸುಧೀರ್ ಕುಮಾರ್ ರೆಡ್ಡಿ ಗುರುವಾರ ಅಧಿಕಾರ ಸ್ವೀಕರಿಸಿದರು.

ದ.ಕ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿದ್ದ ಪ್ರಸ್ತುತ ಬೆಂಗಳೂರಿನ ನಗರ ಪೋಲಿಸ್ ಆಡಳಿತ ವಿಭಾಗಕ್ಕೆ ವರ್ಗವಣೆಗೊಂಡಿರುವ ಭೂಷಣ್ ಗುಲಾಬ್ ರಾವ್ ಬೋರಸೆ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು.

ಮೂಲತಃ ಆಂಧ್ರ ಪ್ರದೇಶದ ಗುಂಟೂರಿನವರಾದ ಸುಧಿರ್ ಕುಮಾರ್ ಅವರು 2010 ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದು, ಮಂಡ್ಯದಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, ಚಿಕ್ಕಬಳ್ಳಾಪುರ, ಬೀದರ್ ಜಿಲ್ಲೆಗಳಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಭೂಷಣ್ ಗುಲಾಬ್ ರಾವ್ ಬೋರಸೆ ಅವರು 2016 ಮೇ 20 ರಂದು ದಕ ಜಿಲ್ಲಾ ಎಸ್ಪಿಯಾಗಿ ಅಧಿಕಾರಿ ವಹಿಸಿದ್ದರು.


Spread the love

Exit mobile version