ಸುವರ್ಣ ತ್ರಿಭುಜ ನಾಪತ್ತೆ; ಮೀನುಗಾರರಿಗೆ ಪರಿಹಾರ ನೀಡಲು ರಕ್ಷಣಾ ಸಚಿವರಿಗೆ ಮನವಿ
ಮಂಗಳೂರು: ವರ್ಷದ ಹಿಂದೆ ಮೀನುಗಾರಿಕೆಗೆಂದು ಆಳಸಮುದ್ರಕ್ಕೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿದ್ದು ಅದರಲ್ಲಿ ಇದ್ದ ಮೀನುಗಾರರ ಕುಟುಂಬಕ್ಕೆ ಹೆಚ್ಚಿನ ಮೊತ್ತದ ಪರಿಹಾರ ಒದಗಿಸಲು ಆಗ್ರಹಿಸಿ ಮೀನುಗಾರರ ನಿಯೋಗವು ಸೋಮವಾರ ಮಂಗಳೂರಿನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಿಗೆ ಮನವಿ ಸಲ್ಲಿಸಿತು.
ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲು ಮತ್ತು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಇವರ ನೇತೃತ್ವದಲ್ಲಿ ಉಡುಪಿ ಶಾಸಕರಾದ ಕೆ ರಘುಪತಿ ಭಟ್ ನಿಯೋಗದ ನೇತೃತ್ವ ವಹಿಸಿದ್ದರು. ಮನವಿಗೆ ಸ್ಪಂದಿಸಿದ ಸಚಿವರು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮೀನುಗಾರಿಕಾ ಫೆಡರೇಷನ್ ಇದರ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ಹಾಗೂ ಮೀನುಗಾರ ಮುಖಂಡರಾದ ಸತೀಶ್ ಕುಂದರ್, ರವಿರಾಜ್ ಸುವರ್ಣ, ಹರೀಶ್ ಕುಂದರ್, ಪಾಂಡುರಂಗ ಕೋಟ್ಯಾನ್, ಗೋಪಾಲ್ ಆರ್,ಕೆ, ಹಾಗೂ ಸಂತ್ರಸ್ತ ಮೀನುಗಾರ ಕುಟುಂಬಿಕರು ಉಪಸ್ಥಿತರಿದ್ದರು.