ಸೆ.1ರಂದು ದ.ಕ, ಉಡುಪಿ ಜಿಲ್ಲೆಯಲ್ಲಿ ಬಕ್ರೀದ್ ರಜೆ
ಮ0ಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವು ಸೆಪ್ಟೆಂಬರ್ 1ರಂದು ನಡೆಯುವ ಪ್ರಯುಕ್ತ ಉಭಯ ಜಿಲ್ಲೆಯಲ್ಲಿ ಅಂದು ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರಕಾರ ಆದೇಶಿಸಿದೆ.
ಸೆ.2ರಂದು ನಿಗದಿಯಾಗಿದ್ದ ಬಕ್ರೀದ್ ರಜೆಯನ್ನು ಬದಲಾಯಿಸಿ, ದ.ಕ. ಜಿಲ್ಲೆಯಲ್ಲಿ ಸೆಪ್ಟೆಂಬರ್ 1ರಂದು ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ರಜೆ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಆ ಪ್ರಕಾರ ಆದೇಶ ಹೊರಡಿಸಲಾಗಿದೆ. ಸರಕಾರ ಸೆಪ್ಟೆಂಬರ್ 2ರಂದು ಎಂದಿನಂತೆ ಶಾಲಾ ಕಾಲೇಜುಗಳು, ಸರಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.