Home Mangalorean News Kannada News ಸೆ. 1: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ   ಆರೋಗ್ಯ ಸುರಕ್ಷಾ...

ಸೆ. 1: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ   ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ

Spread the love

ಸೆ. 1: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ   ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ

ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ ಸಪ್ಟೆಂಬರ್ 1 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಕುಂದಾಪುರದ ರೋಟರಿ ಕಲಾಮಂದಿರದಲ್ಲಿ ಜರುಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ| ಡಾ|ಜೆರಾಲ್ಡ್ ಐಸಾಕ್ ಲೋಬೊ ನೆರವೇರಿಸಲಿದ್ದು, ಮಡಿಕೇರಿ ಸಹಾಯಕ ಫಾರೆಸ್ಟ್ ರೇಂಜ್ ಅಧಿಕಾರಿ ಶಮಾನ್ ಕ್ಯಾಸ್ತಲಿನೊ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ಇದರ ಅಧ್ಯಕ್ಷರಾದ ಜಾನ್ ಡಿಸಿಲ್ವಾ, ಕುಂದಾಪುರ ವಲಯ ಪ್ರಧಾನ ಧರ್ಮಗುರು ವಂ|ಸ್ಟ್ಯಾನಿ ತಾವ್ರೊ, ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್, ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ನಿರ್ಗಮನ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್ ಭಾಗವಹಿಸಲಿದ್ದಾರೆ ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಪ್ರಕಟಣೆಯಲ್ಲಿ ತಿಳಿಸಿದೆ.


Spread the love

Exit mobile version