ಸ್ಥಳೀಯಾಡಳಿತ ಪ್ರತಿನಿಧಿಗಳ ಧ್ವನಿಯಾಗಿ ಕೆಲಸ ಮಾಡುವೆ – ಕಿಶೋರ್ ಕುಮಾರ್ ಪುತ್ತೂರು

Spread the love

ಸ್ಥಳೀಯಾಡಳಿತ ಪ್ರತಿನಿಧಿಗಳ ಧ್ವನಿಯಾಗಿ ಕೆಲಸ ಮಾಡುವೆ – ಕಿಶೋರ್ ಕುಮಾರ್ ಪುತ್ತೂರು

ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ನಿಟ್ಟಿನಲ್ಲಿ ಉಡುಪಿ ನಗರ ಸಭೆ ಸದ್ಯಸರ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್, ಚುನಾವಣೆ ದಿನ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮತದಾರನೂ ಮತ ಚಲಾಯಿಸುವಂತೆ ಪ್ರೇರೆಪಿಸಬೇಕು. ಚುನಾವಣೆಯಲ್ಲಿ ಬಿಜೆಪಿಯ ಗೆಲುವು ನಿಮ್ಮೆಲ್ಲರ ಪರಿಶ್ರಮದಿಂದ ಮಾತ್ರ ಸಾಧ್ಯ. ಕೋಟ ಶ್ರೀನಿವಾಸ್ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಿಮ್ಮೆಲ್ಲರ ಧ್ವನಿಯಾಗಿ ವಿಧಾನ ಪರಿಷತ್ತಿನಲ್ಲಿ ಕೆಲಸ ಮಾಡುತ್ತೇನೆ ಎಂದರು.

ಸಭೆಯಲ್ಲಿ ಉಡುಪಿ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಉಡುಪಿ ಶಾಸಕ ಯಶಪಾಲ್ ಸುವರ್ಣ, ನಗರ ಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ, ರೇಷ್ಮಾ ಉದಯ ಶೆಟ್ಟಿ, ಮಂಡಲ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್ ಹಾಗೂ ಎಲ್ಲಾ ನಗರ ಸಭೆ ಸದಸ್ಯರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments