ಸ್ವರ್ಣಕಮಲ ಪ್ರಶಸ್ತಿ ವಿಜೇತ ‘ಬ್ಯಾರಿ’ ಚಿತ್ರ ಸಾರ್ವಜನಿಕವಾಗಿ ಪ್ರದರ್ಶಿಸದಂತೆ ನ್ಯಾಯಾಲಯದಿಂದ ಆದೇಶ

Spread the love

ಸ್ವರ್ಣಕಮಲ ಪ್ರಶಸ್ತಿ ವಿಜೇತ ‘ಬ್ಯಾರಿ’ ಚಿತ್ರ ಸಾರ್ವಜನಿಕವಾಗಿ ಪ್ರದರ್ಶಿಸದಂತೆ ನ್ಯಾಯಾಲಯದಿಂದ ಆದೇಶ

ಮಂಗಳೂರು: ‘ಸ್ವರ್ಣ ಕಮಲ’ ರಾಷ್ಟ್ರ ಪ್ರಶಸ್ತಿ ಪಡೆದ ಬ್ಯಾರಿ ಭಾಷೆಯ ಮೊತ್ತ ಮೊದಲ ‘ಬ್ಯಾರಿ’ ಹೆಸರಿನ ಚಲನ ಚಿತ್ರವು ನನ್ನ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಕೃತಿಯ ಕತೆಯನ್ನು ಕೃತಿಚೌರ್ಯವೆಸಗಿ ಮಾಡಿರುವುದು ಮೂರನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಚಿತ್ರವನ್ನು ಇನ್ನು ಮುಂದೆ ಎಲ್ಲೂ ಪ್ರದರ್ಶಿಸಬಾರದು ಎಂದು ನ್ಯಾಯಾಲಯ ಆದೇಶ ನೀಡಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಾಹಿತಿ ಸಾರಾ ಅಬೂಬಕ್ಕರ್ ಅವರು ಅಲ್ತಾಫ್ ಹುಸೇನ್ ಎಂಬವರು ಈ ಚಿತ್ರವನ್ನು ನಿರ್ಮಿಸಿ, ಸಿನಿಮಾದಲ್ಲಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸುವೀರನ್ ಚಿತ್ರವನ್ನು ನಿರ್ದೇಶಿಸಿದ್ದರು. 59ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ‘ಬ್ಯಾರಿ’ ಚಿತ್ರ ಸ್ವರ್ಣಕಮಲ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ಈ ಸಿನಿಮಾ ನನ್ನ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಕೃತಿಯನ್ನು ಆಧರಿಸಿ ಮಾಡಿರುವುದು ನನ್ನ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಚಿತ್ರ ನಿರ್ಮಾಪಕರು, ನಿರ್ದೇಶಕರ ವಿರುದ್ಧ ನಾನು 2011ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದೆ. ಇದೀಗ ಮೂರನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿರುವ ಮುರಳೀಧರ ಪೈ ಬಿ. ತೀರ್ಪನ್ನು ನೀಡಿದ್ದು, ಸಾರ್ವಜನಿಕವಾಗಿ ಸಿನಿಮಾವನ್ನು ಪ್ರದರ್ಶಿಸದಂತೆ ಆದೇಶಿಸಿದ್ದಾರೆ.

ಇದಲ್ಲದೆ, ಕೃತಿಚೌರ್ಯಕ್ಕಾಗಿ ಲೇಖಕಿಗೆ ಎರಡು ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ನ್ಯಾಯಾಲಯ ಆದೇಶಿಸಿದೆ. ಜೊತೆಗೆ ವಿಚಾರಣಾವಧಿಯ (ಎಂಟು ವರ್ಷ 12 ದಿನಗಳು) ಕಾಲದ ಬಡ್ಡಿಯನ್ನು, ನ್ಯಾಯಾಲಯದ ವೆಚ್ಚವನ್ನೂ ಪಾವತಿಸುವುದಕ್ಕೆ ಆದೇಶ ನೀಡಿದೆ. ‘ಚಂದ್ರಗಿರಿಯ ತೀರದಲ್ಲಿ’ ಕಾದಂಬರಿ ‘ಲಂಕೇಶ್ ಪತ್ರಿಕೆ’ಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿದ್ದು, ಸಾರ್ವಜನಿಕವಾಗಿ ತೀವ್ರ ಚರ್ಚೆಗೊಳಗಾಗಿರುವ ಕೃತಿಯಾಗಿತ್ತು. ಅಪಾರ ಓದುಗರನ್ನು ಸೆಳೆದುಕೊಂಡ ಹೆಮ್ಮೆ ಈ ಕಾದಂಬರಿಯದು. ಈ ಕಾದಂಬರಿಯ ಕತೆಯನ್ನು, ನನ್ನ ಯಾವುದೇ ಅನುಮತಿಯಿಲ್ಲದೆ ಕದ್ದು ಸಿನಿಮಾ ಮಾಡಿರುವುದರಿಂದ ನ್ಯಾಯಾಲಯದ ಮೆಟ್ಟಿಲೇರುವುದು ನನಗೆ ಅನಿವಾರ್ಯವಾಗಿತ್ತು.

ನನ್ನ ಪರವಾಗಿ ಹಿರಿಯ ನ್ಯಾಯವಾದಿ ದಿವಂಗತ ಗೌರಿಶಂಕರ್ ಸುಮಾರು ಹತ್ತು ವರ್ಷಗಳ ಕಾಲ ವಾದಿಸಿದರು. ಬಳಿಕ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಇನ್ನೋರ್ವ ಹಿರಿಯ ನ್ಯಾಯವಾದಿ ಶ್ಯಾಮರಾವ್ ಅವರಿಗೆ ಹಸ್ತಾಂತರಿಸಿದರು. ನನ್ನ ಪರವಾಗಿ ವಾದಿಸಿ ಈ ಮೊಕದ್ದಮೆಯನ್ನು ಗೆಲ್ಲಿಸಿಕೊಟ್ಟ ಇವರಿಗೆ ನನ್ನ ಕೃತಜ್ಞತೆಗಳು. ಈ ಸಂದರ್ಭದಲ್ಲಿ ನನಗೆ ನ್ಯಾಯ ದೊರಕುವುದಕ್ಕೆ ನೆರವಾಗಿರುವ ಸರ್ವರಿಗೂ ಕೃತಜ್ಞಳಾಗಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
1 Comment
Inline Feedbacks
View all comments
siva
5 years ago

Two lakhs is too low compensation. Intellectual property is not cheap…
Stealing someone’s work is not a small crime. The fine must adequately compensate the author and in addition, should be large enough to be aberrant plus the lawyers who have fought for so many years should also be compensated.
Going by the duration, just the transportation charges to the court alone may be more than 2 lakhs!
Those culprits must be laughing and enjoying the loot!