Home Mangalorean News Kannada News ಸ್ವಾತಂತ್ರ್ಯೋತ್ಸವ: ಪೂರ್ವಭಾವಿ ಸಭೆ

ಸ್ವಾತಂತ್ರ್ಯೋತ್ಸವ: ಪೂರ್ವಭಾವಿ ಸಭೆ

Spread the love
RedditLinkedinYoutubeEmailFacebook MessengerTelegramWhatsapp

ಸ್ವಾತಂತ್ರ್ಯೋತ್ಸವ: ಪೂರ್ವಭಾವಿ ಸಭೆ

ಮ0ಗಳೂರು: ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.
ಈ ಸಂಬಂಧ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಮಂಗಳೂರಿನ ನೆಹರು ಮೈದಾನದಲ್ಲಿ ಆ. 15ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಅಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರಿಂದ ಗೌರವರಕ್ಷೆ ಸ್ವೀಕಾರ, ಪಥಸಂಚಲನೆ, ಸಾಂಸ್ಕøತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಯಾವುದೇ ರೀತಿಯಲ್ಲಿ ಲೋಪವಾಗದಂತೆ ಕ್ರಮವಹಿಸಲು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕಾರ್ಯಕ್ರಮ ನಡೆಯುವ ನೆಹರು ಮೈದಾನದಲ್ಲಿ ಮಹಾನಗರಪಾಲಿಕೆಯು ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಬೇಕು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಎನ್.ಆರ್. ಉಮೇಶ್, ಹೆಚ್ಚುವರಿ ಎಸ್‍ಪಿ ವೇದಮೂರ್ತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ ಮತ್ತಿತರರು ಇದ್ದರು.


Spread the love
RedditLinkedinYoutubeEmailFacebook MessengerTelegramWhatsapp

Exit mobile version