Home Mangalorean News Kannada News ಹರೇಕಳ: ಶಾಲಾ ಆವರಣ‌ ಗೋಡೆ ಕುಸಿದು ಬಾಲಕಿ ಮೃತ್ಯು

ಹರೇಕಳ: ಶಾಲಾ ಆವರಣ‌ ಗೋಡೆ ಕುಸಿದು ಬಾಲಕಿ ಮೃತ್ಯು

Spread the love

ಹರೇಕಳ: ಶಾಲಾ ಆವರಣ‌ ಗೋಡೆ ಕುಸಿದು ಬಾಲಕಿ ಮೃತ್ಯು

ಕೊಣಾಜೆ: ಹರೇಕಳ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿನಿ ಶಾಲೆಯ ಕಂಪೌಂಡ್ ವಾಲ್ ಕುಸಿದು ದಾರುಣವಾಗು ಸಾವನ್ನಪ್ಪಿರುವ ಘಟನೆ ಹರೇಕಳ ಗ್ರಾ.ಪಂ ವ್ಯಾಪ್ತಿಯ ನ್ಯೂಪಡ್ಪುವಿನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಸಂಜೆ ವೇಳೆ ಸುರಿದ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಖ್ – ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತ ಬಾಲಕಿ.

ಘಟನೆ ವಿವರ : ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಭಾಗವಹಿಸಿದ್ದಳು. ಸಂಜೆ ವೇಳೆ ಮನೆಗೆ ಹಿಂತಿರುಗುವ ಸಂದರ್ಭ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದಿದೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ, ಬಾಲಕಿ ಪ್ರಾಣಪಕ್ಷಿ ಹಾರಿಹೋಗಿತ್ತು. ಬೆಳಿಗ್ಗೆಯಿಂದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಆಗಾಗ್ಗ ಮಳೆಯಾಗುತ್ತಿದ್ದು, ಇದರಿಂದಾಗಿ ಕಂಪೌಂಡ್ ಶಿಥಿಲಗೊಂಡು ಬಿದ್ದಿದೆ.

ಘಟನಾ ಸ್ಥಳಕ್ಕೆ ಹರೇಕಳ ಗ್ರಾ.ಪಂ ಅಧಿಕಾರಿಗಳು, ಕೊಣಾಜೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

Exit mobile version