Spread the love
ಹಾಸನ: ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ
ಹಾಸನ: ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ.
ಸೋಮಶೇಖರ್, ಭಾಗ್ಯ ದಂಪತಿ ಪುತ್ರಿ ದೀಪಾ(34) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.
ಇವರು ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ದೀಪಾ ಇಂದು(ಮೇ.09) ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಕುರಿತು ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Spread the love