ಹಿಂಜಾವೇ ಮುಖಂಡ ಜಗದೀಶ್ ಕಾರಂತ ಬಂಧನ
ಮಂಗಳೂರು: ಪ್ರತಿಭಟನಾ ಸಭೆಯೊಂದರಲ್ಲಿ ಕೋಮು ಪ್ರಚೋದನಕಾರಿಯಾಗಿ ಹಾಗೂ ಪೋಲಿಸರನ್ನು ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದು ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತ್ ರನ್ನು ಪೋಲಿಸರು ಬಂಧಿಸಿದ್ದಾರೆ.
ಹಿಂದೂ ಜಾಗರಣ ವೇದಿಕೆಯ ವತಿಯಿಂದ ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಕೋಮುಪ್ರಚೋದನಕಾರಿಯಾಗಿ ಮಾತನಾಡಿದ್ದಲ್ಲದೆ ಪೋಲಿಸರ ವಿರುದ್ದ ಅವಮಾನಕಾರಿ ಹೇಳಿಕೆ ನೀಡಿ, ಬೆದರಿಕೆ ಒಡ್ಡಿದ ಆರೋಪದಲ್ಲಿ ಹಿಂಜಾವೇ ಕ್ಷೇತ್ರಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದರ ಆಧಾರದ ಮೇಲೆ ಜಗದೀಶ್ ಕಾರಂತರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೋಲಿಸ್ ಮೂಲಗಳು ತಿಳಿಸಿದೆ.