ಹಿಂದೂ ವೋಟು ಬೇಡ ಎನ್ನುವ ಸುಳ್ಳು ಸುದ್ದಿ ಪೋಸ್ಟ್: ಪ್ರಭಾಕರ್, ವಸಂತ ಗಿಳಿಯಾರ್ ಸೇರಿಂದತೆ 7 ಜನರ ವಿರುದ್ಧ ಎಫ್‌ಐಆರ್

Spread the love

ಹಿಂದೂ ವೋಟು ಬೇಡ ಎನ್ನುವ ಸುಳ್ಳು ಸುದ್ದಿ ಪೋಸ್ಟ್: ಪ್ರಭಾಕರ್, ವಸಂತ ಗಿಳಿಯಾರ್ ಸೇರಿಂದತೆ 7 ಜನರ ವಿರುದ್ಧ ಎಫ್ಐಆರ್

ಬೆಂಗಳೂರು: ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಏಳು ಜನರ ವಿರುದ್ಧ ದೂರು ದಾಖಲಾಗಿದೆ. ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿತ್ತು. ಈ ಸಂಬಂಧ ಕಾಂಗ್ರೆಸ್ ಕಾನೂನು ಘಟನೆ ಸೈಬರ್ ಕ್ರೈಂ ಠಾಣೆಗೆ ಕ ದೂರು ನೀಡಿತ್ತು. ಈ ದೂರಿನ ಮೇರೆಗೆ ಸದ್ಯ ಪ್ರಭಾಕರ್, ವಸಂತ ಗಿಳಿಯಾರ್ ಸೇರಿದಂತೆ ಒಟ್ಟು 7 ಜನರು ವಿರುದ್ದ ಎಫ್​ಐಆರ್ ದಾಖಲಾಗಿದೆ

ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೂ ದೂರು
ಹಿಂದುಗಳ ಮತ ನಮಗೆ ಬೇಡ, ಮುಸ್ಲಿಮರ ವೋಟು  ನಮಗೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸುದ್ದಿಯೊಂದು ಹರಿದಾಡುತ್ತಿದೆ. ಫ್ಯಾಕ್ಟ್​ಚೆಕ್ ಮಾಡಿ ನೋಡಿದರೆ ಈ ರೀತಿಯಾಗಿ ಯಾವುದೇ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗಿಲ್ಲ. ಈ ರೀತಿಯಾಗಿ ನಕಲಿ ಸುದ್ದಿಯೊಂದನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ನಕಲಿ ಸುದ್ದಿಯನ್ನು ಸಮಾಜಿಕ ಜಾತಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ನಾಯಕರಾದ ರಮೇಶ್ ಬಾಬು, ವಿಜಯ್ ಮತ್ತಿಕಟ್ಟಿ, ರವಿ ಗೌಡ ಹಾಗೂ ದಿವಾಕರ್ ಅವರು ಬಿಜೆಪಿ ವಿರುದ್ದ ಫೇಕ್ ನ್ಯೂಸ್ ಸೃಷ್ಟಿಸಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಫೇಕ್ ನ್ಯೂಸ್ ಹರಡುವುದನ್ನು ತಡೆಯಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

 ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಇನ್ನು ಈ ಕುರಿತು ಸ್ವತಃ ಸಿದ್ಧರಾಮಯ್ಯ ತಮ್ಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದು, ‘ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು’ ಎಂದು ಹೇಳಿದ್ದಾರೆ.

‘ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು’ ಎಂದು ಅವರ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿಸಬೇಕು ಎಂದು ಮನಿ ಮಾಡಿಕೊಂಡಿರುವ ಅವರು, ‘ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ’ ಎಂದು ತಿಳಿಸಿದ್ದಾರೆ.

‘ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ’ ಎಂದು ಖಡಕ್ ಆಗಿ ಹೇಳಿದ್ದಾರೆ.


Spread the love