ಹುಬ್ಬಳ್ಳಿ | ಬಾಲಕಿಯ ಹತ್ಯೆ ಪ್ರಕರಣ : ಪೊಲೀಸ್‌ ಗುಂಡೇಟಿಗೆ ಆರೋಪಿ ಬಲಿ

Spread the love

ಹುಬ್ಬಳ್ಳಿ | ಬಾಲಕಿಯ ಹತ್ಯೆ ಪ್ರಕರಣ : ಪೊಲೀಸ್‌ ಗುಂಡೇಟಿಗೆ ಆರೋಪಿ ಬಲಿ

ಹುಬ್ಬಳ್ಳಿ : ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಆರೋಪಿಯು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.

ರಿತೇಶ್‌ ಕುಮಾರ್‌ ಪೊಲೀಸರ ಗುಂಡೇಟಿಗೆ ಬಲಿಯಾದ ಆರೋಪಿ ಎಂದು ಪೊಲೀಸ್ ಕಮಿಷನರ್‌ ಶಶಿಕುಮಾರ್‌ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ. ಪರಿಣಾಮ ಎದೆಗೆ ಗುಂಡು ತಗುಲಿ ಆರೋಪಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಓರ್ವ ಪಿಎಸ್ಐ ಮತ್ತು ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ ಸಂಬಂಭ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ್ ಮಾತನಾಡಿ, “ಕೊಪ್ಪಳ ಮೂಲದ ಕುಟುಂಬ ಮನೆಗೆಲಸ, ಪೇಂಟಿಂಗ್ ಕೆಲಸ ಮಾಡುವ ಸಲುವಾಗಿ ಹುಬ್ಬಳ್ಳಿಗೆ ಬಂದು ನೆಲೆಸಿದೆ. ಮೃತಪಟ್ಟಿರುವ ಬಾಲಕಿಯ ತಂದೆ ಪೇಂಟಿಂಗ್ ಕೆಲಸ ಮಾಡುತ್ತಿದ್ದಾರೆ. ಬಾಲಕಿ ತಾಯಿ ಮನೆಗೆಲಸಕ್ಕೆ ತೆರಳುವಾಗ ಜೊತೆಯಲ್ಲೇ ಕರೆದೊಯ್ದಿದ್ದರು. ತಾಯಿ ಮನೆಯೊಳಗೆ ತೆರಳಿದ್ದಾಗ ಮಗು ಹೊರಗಡೆ ಆಟವಾಡುತ್ತಿತ್ತು. ಈ ಸಂದರ್ಭದಲ್ಲಿ ಮಗುವನ್ನು ಆರೋಪಿ ರಿತೇಶ್​ ಕುಮಾರ್​​ ಎತ್ತಿಕೊಂಡು ಹೋಗಿದ್ದಾನೆ” ಎಂದು ತಿಳಿಸಿದರು.

“ಸಿಸಿಟಿವಿ ದೃಶ್ಯಾವಗಳಿಗಳನ್ನ ಆಧರಿಸಿ ಆರೋಪಿ ಕೃತ್ಯವೆಸಗಿದ್ದು ಪತ್ತೆಯಾಗಿತ್ತು. ಆರೋಪಿ ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿ ವಾಸವಿದ್ದನು. ಈ ಮಾಹಿತಿ ಆಧರಿಸಿ, ಆರೋಪಿಯನ್ನು ಬಂಧಿಸಲು ತೆರಳಿದಾಗ ನಮ್ಮ ಸಿಬ್ಬಂದಿ ಮೇಲೆ ದಾಳಿ ಮಾಡಿದನು. ಈ ವೇಳೆ, ಪಿಎಸ್​ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದರು. ಆರೋಪಿ ಓಡಿ ಹೋಗಲು ಯತ್ನಿಸಿದಾಗ ಆತನ ಮೇಲೆ ಫೈರಿಂಗ್ ಮಾಡಿದರು. ಆರೋಪಿಯ ಬೆನ್ನಿಗೆ ಗುಂಡು ತಗುಲಿತ್ತು, ಆಸ್ಪತ್ರೆಗೆ ದಾಖಲಿಸಿದ್ವಿ. ಆದರೆ, ​ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ರಿತೇಶ್​ ಕುಮಾರ್ ಮೃತಪಟ್ಟಿದ್ದಾನೆ. ಇಂತಹ ಗಂಭೀರ ಪ್ರಕರಣದಲ್ಲಿ ಆರೋಪಿಯನ್ನು ತಪ್ಪಿಸಿಕೊಳ್ಳಲು ಬಿಡಲ್ಲ” ಎಂದು ಹೇಳಿದರು.


Spread the love
Subscribe
Notify of

0 Comments
Inline Feedbacks
View all comments