Home Mangalorean News Kannada News ಅಂಗಡಿ ಬೋರ್ಡುಗಳಲ್ಲಿ ಕನ್ನಡ ಕಡ್ಡಾಯಕ್ಕೆ ಮನಪಾ ಆಯುಕ್ತರ ಸೂಚನೆ

ಅಂಗಡಿ ಬೋರ್ಡುಗಳಲ್ಲಿ ಕನ್ನಡ ಕಡ್ಡಾಯಕ್ಕೆ ಮನಪಾ ಆಯುಕ್ತರ ಸೂಚನೆ

Spread the love

ಅಂಗಡಿ ಬೋರ್ಡುಗಳಲ್ಲಿ ಕನ್ನಡ ಕಡ್ಡಾಯಕ್ಕೆ ಮನಪಾ ಆಯುಕ್ತರ ಸೂಚನೆ
 
ಮಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರಗಳ ಉದ್ದಿಮೆಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೇಲ್‌ಗಳು ತಮ್ಮ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಿದೆ.

ಹಾಗಾಗಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉದ್ದಿಮೆದಾರರು ಉದ್ದಿಮೆ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನದಲ್ಲಿ ಶೇ.60ರಷ್ಟು ಪ್ರದರ್ಶಿಸುವ ನಿಬಂಧನೆಯನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ನೀಡಲಾ ಗುತ್ತಿದೆ. ಉದ್ದಿಮೆ ಪರವಾನಿಗೆ ನವೀಕರಣ ಅಥವಾ ಹೊಸದಾಗಿ ಮಂಜೂರಾತಿ ವೇಳೆ ಈ ಬಗ್ಗೆ ಪರಿಶೀಲಿಸಲಾಗುತ್ತಿದೆ.

ಕೆಲವು ಉದ್ದಿಮೆದಾರರು ಸರಕಾರದ ಆದೇಶವನ್ನು ಉಲ್ಲಂಘಿಸಿ ಆಂಗ್ಲ ಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳನ್ನು ಗಂಭಿರವಾಗಿ ಪರಿಗಣಿಸಿದೆ. ಹಾಗಾಗಿ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ಉದ್ದಿಮೆ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಗ್ರಸ್ಥಾನದಲ್ಲಿ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ತಪ್ಪಿದಲ್ಲಿ ಪಾಲಿಕೆಯಿಂದ ನೀಡಲಾಗಿರುವ ಉದ್ದಿಮೆ ಪರವಾನಿಗೆಯನ್ನು ಯಾವುದೇ ಮುನ್ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version