ಅಂತರ್ ಜಿಲ್ಲಾ ಕುಖ್ಯಾತ ದನಕಳ್ಳನ ಬಂಧನ
ಮಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಕುಖ್ಯಾತ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಬಂಧಿತನನ್ನು ಅದ್ಯಪಾಡಿ ನಿವಾಸಿ ಮೊಹಮ್ಮದ್ ಮನ್ಸೂರ್ @ ಮನ್ಸೂರ್ ಅದ್ಯಪಾಡಿ @ ಮುಖ್ತಾರ್ , (38) ಎಂದು ಗುರುತಿಸಲಾಗಿದೆ.
ಮೂಡಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 13/14-03-2018 ರಂದು ಮೂಡು ಮಾರ್ನಾಡು ಎಂಬಲ್ಲಿನ ಮನೆಯ ಹಟ್ಟಿಯಲ್ಲಿ ಕಟ್ಟಿದ್ದ 2 ದನಗಳನ್ನು ಕಾರಿನಲ್ಲಿ ಕಳವು ಮಾಡಿಕೊಂಡು ಹೋಗುತ್ತಿದ್ದುದ್ದನ್ನು ಕಂಡ ಅಲ್ಲಿಯ ಜನರು ಕಾರಿನಲ್ಲಿ ದನಕಳ್ಳರನ್ನು ಹಿಂಬಾಲಿಸಿ ಹೋಗುತ್ತಿದ್ದ ಸಮಯ ದನಕಳ್ಳರು ಕಾರಿನಲ್ಲಿದ್ದವರಿಗೆ ತಲವಾರು ತೋರಿಸಿ ಅವರ ಕಾರಿನ ಮುಂಭಾಗಕ್ಕೆ ಹಾಗೂ ಹೆಡ್ ಲೈಟ್ ಗೆ ತಲವಾರಿನಿಂದ ಕಡಿದು ಬೆದರಿಕೆ ಹಾಕಿ ಕಳ್ಳತನ ಮಾಡಿದ ದನದೊಂದಿಗೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಈತನು ಕುಖ್ಯಾತ ದನ ಕಳ್ಳನಾಗಿದ್ದು, ಈತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ಬಜಪೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಉಡುಪಿ ಜಿಲ್ಲೆಯ ಕಾರ್ಕಳ ಅಜೆಕಾರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ತುಮಕೂರು ಜಿಲ್ಲೆಯ ಚಿಕ್ಕನಾಯಕನಕಳ್ಳಿ ಹುಳಿಯ ಪೊಲೀಸ್ ಠಾಣೆಯಲ್ಲಿ ಒಂದು ದರೋಡೆ ಪ್ರಕರಣ, ಕೊಡಗು ಜಿಲ್ಲೆಯ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಕೊಡ್ಲಿ ಪೇಟೆ ಪೊಲೀಸ್ ಠಾನೆಯಲ್ಲಿ 3 ಪ್ರಕರಣ, ಕುಶಾಲನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಹೀಗೆ ಒಟ್ಟು 13 ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಶಾಂತಾರಾಮ್, ಪಿಎಸ್ಐ ಯವರಾದ ಶ್ಯಾಮ್ ಸುಂದರ್, ಹೆಚ್.ಡಿ ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.