ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ, ರೂ. 1.62 ಕೋಟಿ ಸೊತ್ತು ವಶ

Spread the love

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ, ರೂ. 1.62 ಕೋಟಿ ಸೊತ್ತು ವಶ

ಮಂಗಳೂರು: ನವೆಂಬರ್ 25 ರಂದು ಮಂಗಳೂರು ನಗರದ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಪ್ಟ್ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಎಂಬ ಬೆಲೆಬಾಳುವ ವನ್ಯ ಜೀವಿ ಉತ್ಪನ್ನವನ್ನು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ದಸ್ತಗಿರಿ ಮಾಡಿದ ಮೂರು ಆರೋಪಿತರಿಂದ 1,57,50,000/- ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್), ಕಾರು ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿರುತ್ತಾರೆ.

ಬಂಧಿತರನ್ನು ಚಿಕ್ಕಮಗಳೂರು ಜಿಲ್ಲೆಯ ನಿವಾಸಿ ಪ್ಯಾರೇಜಾನ್ @ಸೇಟು (37), ವಿಟ್ಲ ನಿವಾಸಿ ಬದ್ರುದ್ದೀನ್ @ಬದ್ರು (28), ತಮಿಳುನಾಡು ನಾಗಪಟ್ಟಿನಂ ನಿವಾಸಿ ರಾಜೇಶ್ ಆರ್ (22) ಎಂದು ಗುರುತಿಸಲಾಗಿದೆ

ಬಂಧಿತರಿಂದ 1.575 ಕೆಜಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್)-( 1,57,50,000/-), REDMI ಕಂಪನಿಯ ಮೊಬೈಲ್ ಫೋನ್ -1 (10,000/-), ಸಿಲ್ವರ್ ಬಣ್ಣದ ಸ್ವಿಪ್ಟ್ ಕಾರು-1 (5,00,000/-), MOTOROLA ಕಂಪನಿಯ ಮೊಬೈಲ್ ಫೋನ್ -1 (10,000/-), REDMI ಕಂಪನಿಯ ಮೊಬೈಲ್ ಫೋನ್ -1 (10,000/-), ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ/- 1,62,80,000/-ರೂ ಆಗಬಹುದು.

ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ರವರ ನೇತೃತ್ವದಲ್ಲಿ ಈ ಆರೋಪಿಗಳ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೋಂಡಿದ್ದರು.


Spread the love