ಅಕ್ಟೋಬರ್ 15ರ ಒಳಗೆ ಜನಸಾಮಾನ್ಯರಿಗೆ ಮರಳು ಮುಖ್ಯಮಂತ್ರಿ ಭರವಸೆ

Spread the love

ಅಕ್ಟೋಬರ್ 15ರ ಒಳಗೆ ಜನಸಾಮಾನ್ಯರಿಗೆ ಮರಳು ಮುಖ್ಯಮಂತ್ರಿ ಭರವಸೆ

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ 16 ರಿಂದ ಮರಳು ತೆಗೆಯಲು ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಸಕರು ಮತ್ತು ಸಂಸದರ ಸಭೆಯಲ್ಲಿ ಅವರು ಈ ಭರವಸೆ ನೀಡಿದರು.

ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಮರಳು ಲಭ್ಯತೆ ಬಗ್ಗೆ ಸಮೀಕ್ಷೆ ಆಗಿದ್ದು, ಈ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಬಳಿಕ ಮರಳು ಗಣಿಗಾರಿಕೆಗೆ ದರ ನಿಗದಿ ಮಾಡಲಾಗುವುದು. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದರು.

ಸಾಂಪ್ರದಾಯಿಕವಾಗಿ ಮರುಳು ತೆಗೆಯುವವರಿಗೆ ಗಣಿಗಾರಿಕೆಗೆ ಅವಕಾಶ ನೀಡುವುದರಿಂದ ಅಕ್ರಮ ಗಣಿಗಾರಿಕೆ ಕಡಿವಾಣ ಬೀಳುತ್ತದೆ ಎಂದು ಶಾಸಕರು ಮುಖ್ಯಮಂತ್ರಿಯವರಿಗೆ ತಿಳಿಸಿದರು.


Spread the love