ಅಕ್ರಮ ಪಡಿತರ ಚೀಟಿ ಹಿಂತಿರುಗಿಸಲು ಅವಕಾಶ

Spread the love

ಅಕ್ರಮ ಪಡಿತರ ಚೀಟಿ ಹಿಂತಿರುಗಿಸಲು ಅವಕಾಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ಗಮನಿಸಬೇಕಾದ ಅಂಶ ಇಂತಿವೆ.

ಈ ಕೆಳಗಿನ ಮಾನದಂಡಗಳನ್ನುನಿರುವವರು ಬಿಪಿಎಲ್ ಚೀಟಿಗಳನ್ನು ಹೊಂದಿರುವುದು ಕಾನೂನು ಬಾಹಿರವಾಗುತ್ತದೆ.

ಸರ್ಕಾರಿ ನೌಕರು/ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಸಗಿ ನೌಕರರು/ಸರ್ಕಾರಿ ಅನುದಾನಿತ ನೌಕರರು/ನಿಗಮಗಳು/ಮಂಡಳಿಗಳು/ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ಸೇವಾ ತೆರಿಗೆ/ವ್ಯಾಟ್/ವೃತ್ತಿ ತೆರಿಗೆ ಎಲ್ಲಾ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ, ಇತ್ಯಾದಿಗಳನ್ನು ಹೊಂದಿರುವ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು, ಒಂದೇ ಕುಟುಂಬದಲ್ಲಿದ್ದರೂ/ ಒಟ್ಟಿಗೆ ವಾಸಿಸುತ್ತಿದ್ದರೂ ಪ್ರತ್ಯೇಕ ಪಡಿತರ ಚೀಟಿ ಹೊಂದಿರುವುದು.

ಹೀಗೆ ಅಕ್ರಮವಾಗಿ ಅನರ್ಹರು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ಸರಕಾರಕ್ಕೆ ಹಿಂತಿರುಗಿಸಲು ಸರ್ಕಾರವು ಎಪ್ರಿಲ್ 2020ರ ಅಂತ್ಯದವರೆಗೆ ಮತ್ತೊಂದು ಅವಕಾಶ ನೀಡಿರುತ್ತದೆ.

ಅನರ್ಹರು ನಿಗದಿತ ದಿನಾಂಕದೊಳಗೆ ತಾವು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ತಾಲೂಕು ಕಚೇರಿಯಲ್ಲಿರುವ ಆಹಾರ ಶಿರಸ್ತೆದಾರ್/ ಆಹಾರ ನಿರೀಕ್ಷಕರುಗಳನ್ನು ಸಂಪರ್ಕಿಸಿ ತಾವು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ಎಪಿಎಲ್ ಗೆ ಬದಲಾವಣೆ ಅಥವಾ ರದ್ದುಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ತಾವೇ ಸ್ಚತಃ ಪಡಿತರ ಚೀಟಿಗಳನ್ನು ಹಿಂತಿರುಗಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ.

ಅವಧಿ ಮುಗಿದ ನಂತರ ಇಲಾಖೆಯೇ ಕಾರ್ಯಾಚರಣೆ ನಡೆಸಿ ಅನರ್ಹರು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಡಿಗಳನ್ನು ಹೊಂದಿದ ದಿನಾಂಕದಿಂದ ಪತ್ತೆ ಹಚ್ಚಿದ ದಿನಾಂಕದವರೆಗೆ ತಾವು ಪಡೆದ ಪಡಿತರ ಪದಾರ್ಥಗಳವಾರು ಪ್ರತಿ ಕೆ.ಜಿ. ಗೆ ಮುಕ್ತ ಮಾರುಕಟ್ಟೆಯ ಬೆಲೆಯ ಅನುಸಾರ ಹಣವನ್ನು ದಂಡವನ್ನಾಗಿ ವಸೂಲಿ ಮಾಡಲಾಗುವುದು. ಜೊತೆಗೆ ದಿ ಕರ್ನಾಟಕ ಪ್ರಿವೆನ್ಷನ್ ಆಫ್ ಅನ್ ಅಥರೈಜ್ಡ್ ಪೊಸಿಷಿನ್ ಆಫ್ ರೇಷನ್ ಕಾರ್ಡ್ ಆರ್ಡರ್ – 1977 ರ ಅನ್ವಯ ಕ್ರಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ.

ಆದ್ದರಿಂದ ಅನರ್ಹರು ತಾವು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಡಿಗಳನ್ನು ತಕ್ಷಣವೇ ಸರ್ಕಾರಕ್ಕೆ ವಾಪಾಸು ನೀಡಿ ಕಾನೂನು ಕ್ರಮದಿಂದ ವಿಮುಕ್ತಿ ಹೊಂದಲು ದ.ಕ. ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.


Spread the love