ಅಕ್ರಮ ಮರಳು ಅಡ್ಡೆಗೆ ದಾಳಿ; ನಾಡದೋಣಿ, ಟಿಪ್ಪರ್, ಪಿಕಪ್ ಸೇರಿ ಮೂವರ ವಶ
ಮಂಗಳೂರು: ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿರುವ ಅಧಿಕಾರಿಗಳು ಮೂರು ನಾಡದೋಣಿ, ಒಂದು ಟಿಪ್ಪರ್, ಒಂದು ಪಿಕ್ ಅಪ್ ವಾಹನ ಹಾಗೂ ಮರಳು ತೆಗೆಯಲು ಉಪಯೋಗಿಸುತ್ತಿದ್ದ ಕೆಲವು ಸಾಮಾಗರಿಗಳು ಸೇರಿ ಮೂವರನ್ನು ವಶಕ್ಕೆ ಪಡೆದ ಘಟನೆ ಬುಧವಾರ ಕುಮಾರಧಾರ ನದಿಯ ಏಣಿತಡ್ಕ ಎಂಬಲ್ಲಿ ನಡೆದಿದೆ.
ಕಡಬ ತಾಲೂಕಿನ ಕೊಯಿಲ ಗ್ರಾಮದ ಏಣಿತಡ್ಕ ಎಂಬಲ್ಲಿ ಕುಮಾರಧಾರ ನದಿಯ ಅಂಚಿನಲ್ಲಿ ಯತೀಶ್ ಗೌಡ ಎಂಬವಿರಗೆ ಸೇರಿದ ಸ್ಥಳದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಬಗ್ಗೆ ಖಚಿತ ವರ್ತಮಾನದ ಮೇರೆಗೆ ಪೋಲಿಸರು ದಾಳಿ ನಡೆಸಿ ಆರೋಪಿಗಳಾದ ಅರುಣ್ (27), ಅಯ್ಯಬ್(37), ಅಬ್ದುಲ್ ಲತೀಫ್ (45) ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದು, ಮೂರು ನಾಡದೋಣಿ, ಒಂದು ಟಿಪ್ಪರ್, ಒಂದು ಪಿಕ್ ಅಪ್ ವಾಹನ ಹಾಗೂ ಮರಳು ತೆಗೆಯಲು ಉಪಯೋಗಿಸುತ್ತಿದ್ದ ಕೆಲವು ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಶಕ್ಕೆ ಪಡೆದುಕೋಂಡ ವಸ್ತುಗಳ ಒಟ್ಟು ಮೌಲ್ಯ 12 ಲಕ್ಷ ರೂ ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.