ಅಕ್ರಮ ಮರಳು ಸಾಗಣೆ – ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗೆ ದೂರು
ಉಡುಪಿ: ಹಿರಿಯಡ್ಕದ ಸ್ವರ್ಣ ನದಿಯಿಂದ ಅಕ್ರಮವಾಗಿ ಮರಳು ಸಾಗಣೆ ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿರುವ ಹಗರಣದಲ್ಲಿ ಭಾಗಿಯಾಗಿರುವವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಹಿರಿಯಡ್ಕ ಠಾಣೆಗೆ ದೂರು ನೀಡಲಾಯಿತು.
ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಶೀರೂರು ಮಠದ ಬಳಿಯಿರುವ ಸ್ವರ್ಣ ನದಿಯಲ್ಲಿ ಅಕ್ರಮವಾಗಿ ನೂರಾರು ಲೋಡ್ ಗಳಷ್್ಟು ಮರಳು ಸಾಗಾಣೆ ನಡೆಯುತ್ತಿದೆ. ನಿಯಮ ಬಾಹಿರವಾಗಿ ಜೆಸಿಬಿಗಳ ಮೂಲಕ ನೂರಾರು ಲಾರಿಗಳಷ್ಟು ಮರಳು ತೆಗೆದು ಸಾಗಾಟ ಮಾಡಿರುವುದು ಕಂಡು ಬರುತ್ತದೆ. ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಮರಳುಗಾರಿ ನಡೆಸುವಾಗ ದಾಳಿ ನಡೆಸಿದ್ದಾರೆ. ಶಿರೂರು ಹಾಗೂ ಬಜೆಯಲ್ಲಿ 2 ಕಡೆಗಯಲ್ಲಿ ಮರಳು ತೆಗೆಯಲು ನಡೆದ ಟೆಂಡರ್ ಪ್ರಕ್ರಿಯೆ ಬಗ್ಗೆ ಅಕ್ರಮ ಮರಳು ಸಾಗಾಟದಲ್ಲಿ ಭಾಗಿಯಾದ ಗುತ್ತಿಗೆದಾರರು, ನಗರಸಭೆಯ ಹಾಗೂ ಗಣಿ ಇಲಾಖೆಯ ಅಧಿಕಾರಿಗಳೂ ಹಾಗೂ ಜನಪ್ರತಿನಿಧಿಗಳ ಹಾಗೂ ರಾಜಕಾರಣಿಗಳ ವಿರುದ್ದ ಕ್ರಿಮಿನಲ್ ಕೇಸು ದಾಖಲಿಸುವಂತೆ ಮತ್ತು ಪ್ರಕರಣ ಕುರಿತು ಸೂಕ್ತ ತನಿಖೆಯನ್ನು ನಡೆಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.
ಈ ವೇಳೆ ಜಿಲ್ಲಾ ಯುವ ಕಾಂಗ್ರೆಸ್ಅಧ್ಯಕ್ಷ ವಿಶ್ವಾಸ್ ಅಮೀನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ಧನ್ ಭಂಡಾರ್ಕರ್, ಹಿಂದುಳಿದ ವರ್ಗಗಳ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಯತೀಶ್ ಕರ್ಕೇರಾ, ಉಡುಪಿ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಉಪಸ್ಥಿತರಿದ್ದರು.