Home Mangalorean News Kannada News ಅಗಸ್ಟ್ 3 : ಉಡುಪಿ ಜಿಲ್ಲೆಯಲ್ಲಿ ಮತ್ತೆ 126 ಮಂದಿಗೆ ಕೊರೋನಾ ಪಾಸಿಟಿವ್, 1086 ನೆಗೆಟಿವ್

ಅಗಸ್ಟ್ 3 : ಉಡುಪಿ ಜಿಲ್ಲೆಯಲ್ಲಿ ಮತ್ತೆ 126 ಮಂದಿಗೆ ಕೊರೋನಾ ಪಾಸಿಟಿವ್, 1086 ನೆಗೆಟಿವ್

Spread the love
RedditLinkedinYoutubeEmailFacebook MessengerTelegramWhatsapp

ಅಗಸ್ಟ್ 3 : ಉಡುಪಿ ಜಿಲ್ಲೆಯಲ್ಲಿ ಮತ್ತೆ 126 ಮಂದಿಗೆ ಕೊರೋನಾ ಪಾಸಿಟಿವ್, 1086 ನೆಗೆಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಟ್ಟು 126 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4800 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 977 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಸೋಮವಾರ 1086 ವರದಿಗಳು ನೆಗೆಟಿವ್ ಬಂದಿದ್ದು, 126 ಪಾಸಿಟಿವ್ ಬಂದಿವೆ. 526 ವರದಿಗಳು ಬರುವುದು ಬಾಕಿ ಇದೆ.

ಸೋಮವಾರ ಸೋಂಕಿನ ಲಕ್ಷಣಗಳು ಕಂಡುಬಂದ 39 ಮಂದಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 2812 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1952 ಸಕ್ರಿಯ ಪ್ರಕರಣಗಳು ಬಾಕಿ ಇವೆ.


Spread the love
RedditLinkedinYoutubeEmailFacebook MessengerTelegramWhatsapp

Exit mobile version