ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವರ ಭೇಟಿ

Spread the love

ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವರ ಭೇಟಿ

ಮಂಗಳೂರು: ಹೊಸದಿಲ್ಲಿಯ ಕೃಷಿ ಭವನದಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಭೇಟಿಯಾಗಿ ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕರಾವಳಿಯ ಸಂಸದರು ಮನವಿ ಮಾಡಿದರು.

ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಡಿಸೆಂಬರ್ 6ರಂದು ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಬರುವುದಾಗಿ ಕೇಂದ್ರ ಸಚಿವರು ತಿಳಿಸಿ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದರು ಎಂದು ಸಂಸದರು ತಿಳಿಸಿದ್ದಾರೆ.

ನಿಯೋಗದ ನೇತೃತ್ವವನ್ನು ಶಿವಮೊಗ್ಗ ಸಂಸದ ರಾಘವೇಂದ್ರ ವಹಿಸಿದ್ದು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ, ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ , ಬ್ರಿಜೇಶ್ ಚೌಟ, ಹಿರಿಯರಾದ ಹೊಸ ಬಾಲೆ ಮಂಜಪ್ಪ ಮುಂತಾದವರಿದ್ದರು.


Spread the love