ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಆರ್.ಜಿ.ಪಿ.ಆರ್.ಎಸ್ ಸಂಘಟನೆಯಿಂದ ಪೋಸ್ಟ್ ಕಾರ್ಡ್ ಚಳುವಳಿ

Spread the love

ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಆರ್.ಜಿ.ಪಿ.ಆರ್.ಎಸ್ ಸಂಘಟನೆಯಿಂದ ಪೋಸ್ಟ್ ಕಾರ್ಡ್ ಚಳುವಳಿ

ಉಡುಪಿ: ತೆಲಂಗಾಣದ ಪಶುವೈದ್ಯೆಯ ಅತ್ಯಾಚಾರ ಮತ್ತು ಜೀವಂತವಾಗಿ ದಹಿಸಿದ ಪ್ರಕರಣ ಹಾಗೂ ಕಲಬುರ್ಗಿಯಲ್ಲಿ ನಡೆದ 8 ವರ್ಷದ ಬಾಲಕಿಯ ಅತ್ಯಾಚಾರ-ಹತ್ಯೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ರಾಷ್ಟ್ರಪತಿಗಳನ್ನು ಆಗ್ರಹಿಸಿ ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ನಗರದ ಪ್ರಧಾನ ಅಂಚೆ ಕಚೇರಿಯ ಎದುರು ಪೋಸ್ಟ್ ಕಾರ್ಡ್ ಚಳುವಳಿ ನಡೆಸಿತು.

ಈ ವೇಳೆ ಮಾತನಾಡಿದ ತಾಲೂಕು ಪಂಚಾಯತ್ ಸದಸ್ಯ ಡಾ|ಸುನೀತಾ ಶೆಟ್ಟಿ ಮಹಿಳೆಯರ ಮೇಲಿನ ದೌರ್ಜನ್ಯದಿಂದ ಭಾರತವು ಅಂತರ ರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುತ್ತಿದೆ. ಬಾಲಕಿಯರು, ಯುವತಿಯರು, ಮಹಿಳೆಯರ ಬದುಕು ಅತಂತ್ರವಾಗಿದೆ. ಉಡುಪಿ ಜಿಲ್ಲೆಯಲ್ಲೂ ಸಹ ಹಲವಾರು ಯುವತಿಯರು ಅತ್ಯಾಚಾರಕ್ಕೆ ಒಳಗಾಗಿದ್ದು ಅದರ ಆರೋಪಿಗಳಿಗೆ ಸೂಕ್ತ ರೀತಿಯ ಶಿಕ್ಷೆಯಾಗಿಲ್ಲ. ದೇಶದ ಮಹಿಳೆಯರ ಭದ್ರತೆಗೆ ಸರ್ಕಾರ ವಿಶೇಷ ಆದ್ಯತೆ ನೀಡಬೇಕು. ಅತ್ಯಾಚಾರದ ಬಗ್ಗೆ ತ್ವರಿತ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ಅತ್ಯಾಚಾರದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸಂಯೋಜಕಿ ರೋಶನಿ ಒಲಿವೇರಾ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಆರ್.ಜಿ.ಪಿ.ಆರ್.ಎಸ್ ಸಂಘಟನೆಯ ಪದಾಧಿಕಾರಿಗಳಾದ ಮೇರಿ ಡಿಸೋಜಾ, ಸೋಮನಾಥ್ ಬಿಕೆ, ದಿನೇಶ್ ಕೋಟ್ಯಾನ್, ಸತೀಶ್ ಜಪ್ತಿ, ಸುನೀಲ್ ನಾಯಕ್, ಸುಲೋಚನಾ ದಾಮೋದರ್, ಮಹಾಬಲ ಕುಂದರ್, ಐರಿನ್ ಮಿನೇಜಸ್ ಹಾಗೂ ಇತರರು ಉಪಸ್ಥಿತರಿದ್ದರು.


Spread the love