Home Mangalorean News Kannada News ಅದಾಯಕ್ಕಿಂತ ಹೆಚ್ಚಿನ ಆಸ್ತಿ” ಕರಾವಳಿ ಕಾವಲು ಪಡೆಯ ವೃತ್ತ ನಿರೀಕ್ಷಕ ಗಂಗಿ ರೆಡ್ಡಿ ಗೆ ಶಿಕ್ಷೆ

ಅದಾಯಕ್ಕಿಂತ ಹೆಚ್ಚಿನ ಆಸ್ತಿ” ಕರಾವಳಿ ಕಾವಲು ಪಡೆಯ ವೃತ್ತ ನಿರೀಕ್ಷಕ ಗಂಗಿ ರೆಡ್ಡಿ ಗೆ ಶಿಕ್ಷೆ

Spread the love

ಅದಾಯಕ್ಕಿಂತ ಹೆಚ್ಚಿನ ಆಸ್ತಿ” ಕರಾವಳಿ ಕಾವಲು ಪಡೆಯ ವೃತ್ತ ನಿರೀಕ್ಷಕ ಗಂಗಿ ರೆಡ್ಡಿ ಗೆ ಶಿಕ್ಷೆ

ಮಂಗಳೂರು: ದಿನಾಂಕ 27-08-2009 ರಂದು ಬೆಳ್ತಂಗಡಿ ಯಲ್ಲಿ ಪೋಲಿಸ್ ವೃತ್ತ ನಿರೀಕ್ಷಕರಾಗಿದ್ದ ಸಂದರ್ಬದಲ್ಲಿ ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ಆಗಿನ ಲೋಕಾಯುಕ್ತ ಡಿ. ವೈ.ಎಸ್.ಪಿ. ಸದಾನಂದ ವರ್ಣೇಕರ್ ಮತ್ತು ಅವರ ತಂಡ ಕೇಸು ದಾಖಲಿಸಿ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶ ಪಡಿಸಿಕೊಂಡಿದ್ದರು. ಸುಮಾರು ಹತ್ತೊಂಬತ್ತು ಲಕ್ಷದಸ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಡಿ.ವೈ. ಎಸ್.ಪಿ. ಆಗಿದ್ದ ಎಮ್. ವಿಟ್ಟಲ್ ದಾಸ್ ಪೈ ಆರೋಪಿ ಗಂಗಿ ರೆಡ್ಡಿ ವಿರುದ್ದ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಅಭಿಯೋಜನೆಯ ಪರವಾಗಿ 22 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಭೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನಲೆಯಲ್ಲಿ ಆರೋಪಿಗೆ ಶಿಕ್ಷೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರಿಂದ ಶಿಕ್ಷೆ ಪ್ರಕಟ.

ನ್ಯಾಯಾಧೀಶ ರಿಂದ 111 ಪುಟಗಳ ಸುದೀರ್ಘ ಆದೇಶ. ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 13 (1) (ಇ) ರ ಅಡಿ ಯಲ್ಲಿ ಆರೋಪಿ ಗಂಗಿ ರೆಡ್ಡಿ ಅಪರಾಧ ಎಸಗಿದ್ದಾರೆಂದು ಸಾಭೀತುಗೊಂಡಿದೆ

 ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ಶಿಕ್ಷೆಯ ಪ್ರಮಾಣದ ಬಗ್ಗೆ ಆದೇಶ 3 ಗಂಟೆಗೆ ಕಾಯ್ದಿರಿಸಿದ್ದಾರೆ

ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.


Spread the love

Exit mobile version