ಅನಂತ್ ಕುಮಾರ್ ನಿಧನ: ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ಸಂತಾಪ

Spread the love

ಅನಂತ್ ಕುಮಾರ್ ನಿಧನ: ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ಸಂತಾಪ

 

ಕೇಂದ್ರ ಸಚಿವ ಅನಂತ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ಅನಂತ ಕುಮಾರ್ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹಾಗೂ ಹೈಕೋರ್ಟ್ ವಕೀಲ ಎಸ್ ಪವನಚಂದ್ರ ಶೆಟ್ಟಿ ಪಡೆದು ಅಗಲಿದ ಮಹಾನ್ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.

ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರಾಗಿದ್ದ, ಅಟಲ್ ಜಿ, ಅಡ್ವಾಣಿಜಿ, ನರೇಂದ್ರ ಮೋದಿಜಿ ಅವರ ಆತ್ಮೀಯರಾಗಿದ್ದ, ಸಂಘದ ಶಿಸ್ತಿನ ಸಿಪಾಯಿಯಾಗಿ, ಕೇಂದ್ರದಲ್ಲಿ ಸಚಿವರಾಗಿ ಕರ್ನಾಟಕಕ್ಕೆ ಅನೇಕ ಯೋಜನೆಗಳನ್ನು ನೀಡಿದ ಅದರಲ್ಲಿಯೂ ವಿಶೇಷವಾಗಿ ವಿಮಾನಯಾನ ಸಚಿವರಾಗಿದ್ದಾಗ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಗೆ ವಿಶೇಷ ಮುತುವರ್ಜಿಯಲ್ಲಿ ಶ್ರಮಿಸಿದ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿದ್ದಾಗ ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಿ ರಸಗೊಬ್ಬರ ಇಲಾಖೆಯಿಂದ ಕೃಷಿಕರಿಗೆ ಸಿಗಬೇಕಾದ ಸಕಲ ಯೋಜನೆ ಸಿಗುವಂತೆ ಮಾಡಿದ, ಮಂಗಳೂರಿನ ಎಂಸಿಎಫ್ ಪುನಶ್ಚೇತನಕ್ಕೆ ಶ್ರಮಿಸಿದ, ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗುವ ಬಡಜನರಿಗೆ ಕಡಿಮೆ ಬೆಲೆಯಲ್ಲಿ ಸ್ಟ್ರೆಂಟ್ ಸಿಗುವಂತೆ ಮಾಡಿದ, ಜೆನೆರಿಕ್ ಔಷದದ ಮೂಲಕ ಜನಸಾಮಾನ್ಯರಿಗೆ ಕಡಿಮೆ ಖರ್ಚಿನಲ್ಲಿ ಔಷಧ ಸಿಗುವಂತೆ ಮಾಡಿದ, ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ರೂಪುರೇಶೆ ಹಾಕಿಕೊಟ್ಟ ಅಪ್ಪಟ ರಾಷ್ಟ್ರಪ್ರೇಮಿ.

ಅನಂತ ಕುಮಾರ್ ಜಿ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೆ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರಿಗೆ ಈ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.


Spread the love