ಅನಂತ ಕುಮಾರ್ ನಿಧನ ಹಿನ್ನಲೆ ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯ ಸರಕಾರ ಎಲ್ಲಾ ಶಾಲಾ ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅಲ್ಲದೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಕೂಡ ಘೋಷಿಸಿದೆ.
ರಾಜ್ಯಾದ್ಯಂತ ಶಾಲಾ-ಕಾಲೇಜಿಗೆ ಮತ್ತು ಕಚೇರಿಗೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಸಕಲ ಗೌರವದೊಂದಿಗೆ ಅನಂತ ಕುಮಾರ್ ಅವರ ಅಂತ್ಯಕ್ರಿಯೆ ಮಾಡಲಾಗುತ್ತಿದೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಯ ಮುಖಂಡ ಎಚ್.ಎನ್. ಅನಂತಕುಮಾರ್ (59) ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆದರೆ ಇಂದು ನಸುಕಿನ ಜಾವ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.