ಅನಧಿಕೃತ ಮರಳು ದಾಸ್ತಾನು ಪುನಾರವರ್ತನೆಯಾದಲ್ಲಿ ಗೂಂಡಾ ಕಾಯ್ದೆಯಡಿ ಕ್ರಮ-ಜಿಲ್ಲಾಧಿಕಾರಿ ಜಗದೀಶ್
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದು ಮನಗಂಡು ಜಿಲ್ಲೆಯಲ್ಲಿ ಲಭ್ಯವಿರುವ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸಲು, ನಾನ್ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸಲು ಹಾಗೂ ಬಜೆ ಡ್ಯಾಮ್ನಲ್ಲಿ ಹೂಳೆತ್ತಿ, ಸದರಿ ಹೂಳಿನಲ್ಲಿ ದೊರಕುವ ಮರಳನ್ನು ಬೇರ್ಪಡಿಸಿ ಸಾಗಾಟ ಮಾಡಲು ಅನುಮತಿ ನೀಡಿರುವ ಪರವಾನಿಗೆದಾರರು ಅಥವಾ ಇತರರು ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಈಗಾಗಲೇ ಆದೇಶಿಸಲಾಗಿರುತ್ತದೆ.
ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ವಿರುದ್ಧ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯ ಪ್ರಾರಂಭವಾದ ನಂತರ ನ್ಯಾಯಾಲಯದಲ್ಲಿ ಒಒಆಖ ಂಛಿಣ ರಡಿಯಲ್ಲಿ ಹಾಗೂ ಕರ್ನಾಟಕ ಉಪಖನಿಜ ರಿಯಾಯತಿ ನಿಯಮಾವಳಿ 1994 ರನ್ವಯ 23 ಖಾಸಗಿ ದೂರು ದಾಖಲಿಸಲಾಗಿರುತ್ತದೆ.
ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ/ ದಾಸ್ತಾನು ಬಗ್ಗೆ ಮಾಹಿತಿ ಬರುತ್ತಿರುವುದರಿಂದ ಸಂಬಂಧಿಸಿದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸಾರ್ವಜನಿಕರು ಅಗತ್ಯವಿರುವಷ್ಟು ಮರಳನ್ನು ಮಾತ್ರ ಸಾಗಾಟ ಪರವಾನಿಗೆಯೊಂದಿಗೆ ದಾಸ್ತಾನಿರಿಸಲು ಸೂಚಿಸಲಾಗಿದೆ. ಅನಧಿಕೃತ ಮರಳುಗಾರಿಕೆ/ ಸಾಗಾಣಿಕೆ ಅಥವಾ ದಾಸ್ತಾನು ಪುನರಾವರ್ತಿತವಾದಲ್ಲಿ ನಿಯಮಾನುಸಾರ ಗೂಂಡಾ ಕಾಯ್ದೆರಡಿಯಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.