ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ ; ಸಿನಿಮಾ ಹಾಲ್ ನಲ್ಲಿ ಶೇ.50ರಷ್ಟು ವೀಕ್ಷಕರಿಗೆ ಅವಕಾಶ
ಹೊಸದಿಲ್ಲಿ: ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ, ಕ್ರೀಡಾ ತರಬೇತಿ ಹಾಗೂ ಮನೋರಂಜನಾ ಪಾರ್ಕ್ಗಳನ್ನು ತೆರೆಯಲು ಅನುಮತಿ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಮತ್ತು ಮಾಹಿತಿ ಪ್ರಸಾರ ಖಾತೆ ಸಚಿವಾಲಯ, ಅನ್ಲಾಕ್ 5.0 ಮಾರ್ಗಸೂಚಿಗಳನ್ನು ಅತ್ಯಂತ ಶಿಸ್ತುಬ್ಧವಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಪ್ರಮುಖವಾಗಿ ಸಿನಿಮಾ ಹಾಲ್ಗಳು, ಮಲ್ಟಿಪ್ಲೆಕ್ಸ್ಗಳನ್ನು ತೆರಯಲು ಅನುಮತಿ ನೀಡಲಾಗಿದ್ದು, ತನ್ನ ಸಾಮರ್ಥ್ಯದ ಶೇ.50ರಷ್ಟು ವೀಕ್ಷಕರಿಗೆ ಮಾತ್ರ ಸ್ಥಳಾವಕಾಶ ಕಲ್ಪಿಸುವಂತೆ ಸ್ಪಷ್ಟ ಸೂಚನೆ ನೀಡಲಾಗಿದೆ.
ಸಿನಿಮಾ ಹಾಲ್, ಮನೋರಂಜನಾ ಪಾರ್ಕ್ಗಳಲ್ಲಿ ಕೇಂದ್ರದ ಕೊರೊನಾ ಮಾರ್ಗಸೂಚಿಗಳ ಪಾಲನೆ ಕಡ್ಡಾಯ ಎಂದು ತಿಳಿಸಲಾಗಿದ್ದು, ಕ್ರೀಡಾ ತರಬೇತಿಗೂ ಈ ನಿಯಮಗಳು ಅನ್ವಯಿಸುತ್ತವೆ ಎಂದು ಸ್ಪಷ್ಟಪಡಿಸಲಾಗಿದೆ.
ಅ.15ರಿಂದ ಶಾಲಾ-ಕಾಲೇಜುಗಳ ಆರಂಭ:
ಇನ್ನು ಮುಂಬರುವ ಅಕ್ಟೋಬರ್ 15ರಿಂದ ಶಾಲಾ ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡಲಾಗಿದ್ದು,ಅದಾಗ್ಯೂ ಅಂತಿಮ ತೀರ್ಮಾನವನ್ನು ಆಯಾ ರಾಜ್ಯ ಸರ್ಕಾರಗಳೇ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಿದೆ.