ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರಭಾರ ಮುಖ್ಯ ಶಿಕ್ಷಕನ ಬಂಧನ

Spread the love

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರಭಾರ ಮುಖ್ಯ ಶಿಕ್ಷಕನ ಬಂಧನ

ಪುತ್ತೂರು: ಪರೀಕ್ಷಾ ಶುಲ್ಕ ಪಾವತಿಸಲು ಶಾಲೆಗೆ ಬಂದ ವಿದ್ಯಾರ್ಥಿನಿಗೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪುತ್ತೂರು ಒಳಮೊಗ್ರು ನಿವಾಸಿಯಾದ ನಾಸಿರ್ (40) ಎಂದು ಗುರುತಿಸಲಾಗಿದೆ.
ಅಪ್ರಾಪ್ತ ವಿದ್ಯಾರ್ಥಿನಿ ಪರೀಕ್ಷಾ ಶುಲ್ಕ ಪಾವತಿಸಲು ಶಾಲೆಗೆ ಬಂದ ಸಮಯದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ನಾಸಿರ್ ಲೈಂಗಿಕ ಕಿರುಕುಳ ನೀಡಿದ್ದು ಆಕೆ ನೀಡಿದ ದೂರಿನಂತೆ ಪುತ್ತೂರಿನ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು ತನಿಖೆ ಪ್ರಗತಿಯಲ್ಲಿದೆ.


Spread the love