ಅಮಾಸೆಬೈಲು: ಕಂಟೈನರ್ ಲಾರಿಯಲ್ಲಿ ಅಕ್ರಮ ಜಾನುವಾರು ಸಾಗಾಟ : ಇಬ್ಬರ ಬಂಧನ, 37 ಕೋಣಗಳ ರಕ್ಷಣೆ
ಕುಂದಾಪುರ: ಕೋಣಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಇಬ್ಬರನ್ನು ಅಮಾಸೆಬೈಲು ಪೊಲೀಸರು ಮಂಗಳವಾರ ಬಂಧಿಸಿದ್ದು, 37 ಕೋಣಗಳನ್ನು ರಕ್ಷಣೆ ಮಾಡಿದ್ದಾರೆ.
ಬಂಧಿತರನ್ನು ಉತ್ತರಪ್ರದೇಶದ ಶಕೀಲ್ (35) ಮತ್ತು ಪಕ್ರಿ ಆಲಂ (24) ಎಂದು ಗುರುತಿಸಲಾಗಿದೆ.
ಮಂಗಳವಾರ ಬೆಳಿಗೆ ಅಮಾಸೆಬೈಲು ಪಿ ಎಸ್ ಐ ಅನಿಲ್ ಕುಮಾರ್ ಅವರು ಹೊಸಂಗಡಿ ಚೆಕ್ ಪೋಸ್ಟ್ ಬಳಿ ತನ್ನ ಸಿಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬಂದ ಖಚಿತ ಮಾಹಿತಿಯಂತೆ ಸಿಬ್ಬಂದಿಯವರೊಂದಿಗೆ ಹೊಸಂಗಡಿ ಚೆಕ್ ಪೋಸ್ಟ್ ಹತ್ತಿರ ವಾಹನ ತಪಾಸಣೆ ಮಾಡುತ್ತಿರುವಾಗ ಹುಲಿಕಲ್ ಘಾಟಿ ಕಡೆಯಿಂದ ಹೊಸಂಗಡಿ ಕಡೆಗೆ ಬರುತ್ತಿದ್ದ ಟ್ರಕ್ ನ್ನು ನಿಲ್ಲಿಸಿದ್ದಾರೆ.
ಟ್ರಕ್ ಚಾಲಕನು ವಾಹನ ನಿಲ್ಲಿಸಿದ್ದು, ವಾಹನವನ್ನು ತಪಾಸಣೆ ಮಾಡಿದಾಗ ವಾಹನದ ಹಿಂದುಗಡೆ ಮುಚ್ಚಿದ ಬಾಡಿಯಲ್ಲಿ ಸುಮಾರು 37 ಕೋಣಗಳಿದ್ದು , ಕೋಣಗಳನ್ನು ಯಾವುದೇ ಮೇವು, ಆಹಾರ ನೀಡದೆ ಒಂದಕ್ಕೊಂದು ತಾಗಿಕೊಂಡು ಮಿಸುಕಾಡದಂತೆ ಹಿಂಸ್ಮಾತಕವಾಗಿ ಕಟ್ಟಿ ಹಾಕಿ ತುಂಬಿರುವುದು ಕಂಡು ಬಂದಿದೆ. ಆರೋಪಿಗಳಲ್ಲಿ ಕೋಣಗಳ ಬಗ್ಗೆ ವಿಚಾರಿಸಿದಲ್ಲಿ ಕೋಣಗಳನ್ನು ಸಾಗಾಟ ಮಾಡುವ ಬಗ್ಗೆ ಯಾವುದೇ ಪರವಾನಿಗೆಯನ್ನು ಹೊಂದಿರುವುದಿಲ್ಲ ಹಾಗೂ ಜಾನುವಾರುಗಳನ್ನು ಆರೋಪಿಗಳು ವಧೆ ಮಾಡುವ ಉದ್ದೇಶದಿಂದ ಹಿಂಸ್ಮಾತಕವಾಗಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು, ಕೋಣಗಳನ್ನು ತುಂಬಿದ್ದ ಟ್ರಕ್ ಮತ್ತು 37 ಕೋಣಗಳನ್ನು ರಕ್ಷಣೆ ಮಾಡಿದ್ದಾರೆ.
ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ