ಅರ್ಕುಳ: ಭೀಕರ ರಸ್ತೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ವಿದ್ಯಾರ್ಥಿ ಪ್ರವೀತ್ ಸಾವು
ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ವಿಧ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನಪ್ಪಿದ ಘಟನೆ ಅರ್ಕುಳ ಬಳಿ ನಡೆದಿದೆ.
ಮೃತರನ್ನು ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಆಚಾರ್ಯ (22) ಎಂದು ಗುರುತಿಸಲಾಗಿದೆ. ಅರ್ಕುಳ ಸಮೀಪ ಬೈಕ್ ಸಮೇತ ರಸ್ತೆ ಬಿದ್ದಿದ್ದ ಪ್ರವೀತ್ ಮೇಲೆ ವಾಹನವೊಂದು ಹರಿದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀತ್ ಕುಮಾರ್ ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಪ್ರವೀತ್ ಸಸಿ ಹಿತ್ಲು ಯಕ್ಷಗಾನ ತಂಡದ ಕಲಾವಿದ ಎಂದು ತಿಳಿದು ಬಂದಿದೆ