ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದೇಶಿ ವಿಶ್ವ ವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪ ಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ :8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ದೂ.ಸಂ:0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.