Home Mangalorean News Kannada News ಅವೈಜ್ಞಾನಿಕ ಹೆದ್ದಾರಿಯಿಂದ ಅಪಘಾತಗಳಾದರೆ ಗುತ್ತಿಗೆದಾರ, ಎಂಜಿನಿಯರ್ ಮೇಲೆ ಕ್ರಿಮಿನಲ್ ಕೇಸ್ – ಜಿಪಂ ನಿರ್ಣಯ

ಅವೈಜ್ಞಾನಿಕ ಹೆದ್ದಾರಿಯಿಂದ ಅಪಘಾತಗಳಾದರೆ ಗುತ್ತಿಗೆದಾರ, ಎಂಜಿನಿಯರ್ ಮೇಲೆ ಕ್ರಿಮಿನಲ್ ಕೇಸ್ – ಜಿಪಂ ನಿರ್ಣಯ

Spread the love

ಅವೈಜ್ಞಾನಿಕ ಹೆದ್ದಾರಿಯಿಂದ ಅಪಘಾತಗಳಾದರೆ ಗುತ್ತಿಗೆದಾರ, ಎಂಜಿನಿಯರ್ ಮೇಲೆ ಕ್ರಿಮಿನಲ್ ಕೇಸ್ – ಜಿಪಂ ನಿರ್ಣಯ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರುವ ಟೋಲ್ಗೇಟ್ನಲ್ಲಿ 5 ಕಿ.ಮೀ ವ್ಯಾಪ್ತಿಯಲ್ಲಿ ಸ್ಥಳೀಯ ವಾಹನಗಳಿಗೆ ಟೋಲ್ ಸಂಗ್ರಹ ಮಾಡಬಾರದು ಎಂದು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾರಣಗಳಿಂದ ಅಪಘಾತ ಗಳಾದರೆ ಸಂಬಂಧಪಟ್ಟ ಎಂಜಿನಿಯರ್ ಹಾಗೂ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಕೇಸ್ ಹಾಕುವಂತೆ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.
ಇದಕ್ಕೂ ಮೊದಲು ಉತ್ತರಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ, ‘ಸಾಸ್ತಾನದಲ್ಲಿ 5 ಕಿ.ಮೀ ವ್ಯಾಪ್ತಿಯಲ್ಲಿ ಸ್ಥಳೀಯ ವಾಹನಗಳಿಗೆ ಟೋಲ್ ಸಂಗ್ರಹ ಮಾಡುತ್ತಿಲ್ಲ. ಪಡುಬಿದ್ರಿ ಟೋಲ್ಗೇಟ್ನಲ್ಲಿ ಉಚಿತವಿಲ್ಲ, ₹ 265 ತಿಂಗಳ ಪಾಸ್ ತೆಗೆದುಕೊಳ್ಳಬೇಕು’ ಎಂದು ತಿಳಿಸಿದರು.

ಇದರಿಂದ ಸಿಟ್ಟಿಗೆದ್ದ ಜಿಲ್ಲಾ ಪಂಚಾಯಿತಿ ಸದಸ್ಯರು, ಮೊದಲು ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ. ಬಳಿಕ ಟೋಲ್ ಸಂಗ್ರಹಿಸಿ. ಹಲವೆಡೆ ಹೆದ್ದಾರಿ ಬದಿಯ ತೋಡುಗಳನ್ನು ಮುಚ್ಚಲಾಗಿದೆ. ಪರಿಣಾಮ ಮಳೆಗಾಲದಲ್ಲಿ ನೆರೆ ಭೀತಿ ಎದುರಾಗಲಿದೆ. ಅವೈಜ್ಞಾನಿಕ ಡಿವೈಡರ್ ನಿರ್ಮಾಣದಿಂದ ಪ್ರತಿದಿನ ರಸ್ತೆ ಅಪಘಾತಗಳು ಸಂಭವಿಸುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೆದ್ದಾರಿ ಬದಿಯಲ್ಲಿ ಬಸ್ ನಿಲ್ದಾಣ ಗಳಿಲ್ಲ. ಮಳೆ ಬಂದರೆ ನೀರು ನಿಲ್ಲುತ್ತಿವೆ. ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಇದುವರೆಗೂ 16 ಸಭೆಗಳು ನಡೆದಿವೆ. ಯಾವುದೇ ಪ್ರಯೋಜನವಾಗಿಲ್ಲ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯರು ಒಕ್ಕೊರಲಿನಿಂದ ಟೀಕಿಸಿದರು.

‘ಕಳೆದ ಬಾರಿ ನೆರೆ ಬಂದಾಗ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಲಿಲ್ಲ. ಪರಿಣಾಮ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಯಿತು. ಈ ಬಾರಿ ಅಂತಹ ತಪ್ಪುಗಳಾಗದಂತೆ ಎಚ್ಚರವಹಿಸಿ. ನೆರೆ ಪ್ರದೇಶದಲ್ಲಿ ವಿದ್ಯುತ್ ವೈರ್ಗಳು ತೀರಾ ಕೆಳಗೆ ಇದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಜನಾರ್ದನ ತೋನ್ಸೆ ಆಗ್ರಹಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಸಿಂಧೂ ಬಿ.ರೂಪೇಶ್ ಮಾತನಾಡಿ, ‘ನೆರೆ ಕಾಮಗಾರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಿತಿಯನ್ನು ರಚಿಸಿದ್ದು, ಸಭೆ ನಡೆಸುವಂತೆ ಸೂಚಿಸಲಾಗಿದೆ. ಕಳೆದ ಬಾರಿ ನೆರೆ ಬಂದಿದ್ದ ಕಡೆಗಳಲ್ಲಿ ಪರಿಶೀಲನೆ ನಡೆಸಲು ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದೆ’ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಶಿಕಾಂತ್ ಪಡುಬಿದ್ರಿ, ಉದಯ್ ಎಸ್‌.ಕೋಟ್ಯಾನ್‌ ಇದ್ದರು.


Spread the love

Exit mobile version