ಅ.22 ರಂದು ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಯೋಜನೆಗೆ ಸಚಿವ ಸಂಪುಟದ ಅನುಮೋದನೆ – ಶಾಸಕ   ಭಟ್

Spread the love

ಅ.22 ರಂದು ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಯೋಜನೆಗೆ ಸಚಿವ ಸಂಪುಟದ ಅನುಮೋದನೆ – ಶಾಸಕ   ಭಟ್

ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್ ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆ ಅಕ್ಟೋಬರ್ 22 ರಂದು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಳ್ಳಲಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

ಈ ಕುರಿತು ವೀಡಿಯೋ ಸಂದೇಶದಲ್ಲಿ ಮಾಹಿತಿ ನೀಡಿರುವ ಅವರು ಸುಮಾರು ರೂ 115 ಕೋಟಿ ವೆಚ್ಚದಲ್ಲಿ ಕಟ್ಟಡ ಮತ್ತು 250 ಹಾಸಿಗೆಯ ಸಾಮರ್ಥ್ಯಕ್ಕೆ ಬೇಕಾಗುವಷ್ಟು ಸಿಬಂದಿ ಹಾಗೂ ಪೀಠೋಪಕರಣಗಳು ಈ ಯೋಜನೆಯಲ್ಲಿ ಸೇರ್ಪಡೆಗೊಳ್ಳಲಿದೆ.

ಉಡುಪಿ ಜನತೆಯ ಹಲವಾರು ವರ್ಷಗಳ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿಯವರಾದ ಬಿ.ಎಸ್ ಯಡಿಯೂರಪ್ಪ ಅವರಿಗೆ ಹಿಂದಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಬಿ. ರಾಮುಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾll ಸುಧಾಕರ್ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಉಡುಪಿಯ ಸಮಸ್ತ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.


Spread the love