“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಸ್ವಸ್ತ ಸಮಾಜಕ್ಕಾಗಿ- ಯು.ಟಿ ಖಾದರ್ 

Spread the love

“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಸ್ವಸ್ತ ಸಮಾಜಕ್ಕಾಗಿ- ಯು.ಟಿ ಖಾದರ್ 

ಮಂಗಳೂರು : “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಸ್ವಸ್ತ ಸಮಾಜಕ್ಕಾಗಿ ಜನರಿಗೆ ತುರ್ತು ಚಿಕಿತ್ಸೆ ನೀಡುವ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನದ ಕೊಡುಗೆಯೊಂದಿಗೆ ಈ ಯೋಜನೆ ಸಾರ್ವಜನಿಕರಿಗೆ ಲಭ್ಯವಾಗುತ್ತಿದೆ. ಈ ಯೋಜನೆಯು ಪ್ರಾರ್ಥಮಿಕ, ಸಾಮಾನ್ಯ ದ್ವಿತೀಯ, ಸಂಕೀರ್ಣ ದ್ವಿತೀಯ, ತೃತೀಯ ಹಾಗೂ ತುರ್ತು ಹಂತದ ಚಿಕಿತ್ಸೆಗಳನ್ನು ಒದಗಿಸಲಾಗುತ್ತಿದೆ. ಬಿಪಿಎಲ್ ಕಾರ್ಡು ಹೊಂದಿರುವವರಿಗೆ ವಾರ್ಷಿಕ ರೂ. 5 ಲಕ್ಷ ಹಾಗೂ ಎಪಿಎಲ್ ಕಾರ್ಡು ಹೊಂದಿದವರಿಗೆ ವಾರ್ಷಿಕ ಮಿತಿ ರೂ. 1.50 ಲಕ್ಷ ಇರುತ್ತದೆ. ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ತಿಳಿಸಿದರು.

ಇವರು ದ.ಕ.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸಾರ್ವಜನಿಕರಿಗೆ ಈ ಯೋಜನೆಯ ಬಗ್ಗೆ ಸರಿಯಾಗಿ ತಿಳುವಳಿಕೆ ಇಲ್ಲದ ಕಾರಣ ಸ್ಥಳೀಯ ಖಾಸಾಗಿ ಆಸ್ಪತ್ರೆಯಲ್ಲಿ ಗೊಂದಲದ ವಾತಾವರಣ ಏರ್ಪಡುತ್ತಿದೆ. ಇದನ್ನು ಮೊದಲು ಸರಿಪಡಿಸಿ ಯಾವ ಆಸ್ಪತ್ರೆಯಲ್ಲಿ ಯಾವ ಚಿಕಿತ್ಸೆ ಈ ಯೋಜನೆಯಡಿಯಲ್ಲಿ ನೀಡಲಾಗುತ್ತಿದೆ. ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕರಪತ್ರಗಳ ಮುಖಾಂತರ ಪ್ರಚಾರ ಪಡಿಸಬೇಕು. ಎಂದರು. ಈ ಯೋಜನೆಯಲ್ಲಿ ತುರ್ತು ಚಿಕಿತ್ಸೆ, ಶಸ್ತ್ರ ಚಿಕಿತ್ಸೆ ಇವುಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ರೋಗ ತಪಾಸಣೆಗಾಗಿ ವೆಚ್ಚ ಮಾಡಲಾಗುವುದಿಲ್ಲ. ಈ ಯೋಜನೆಯ ಫಲಾನುಭವಿಗಳು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವ್ಯಾಪ್ತಿಗೆ ಬರುತ್ತಿದ್ದು, ಚಿಕಿತ್ಸೆ ಸದರಿ ಆಸ್ಪತ್ರೆಯಲ್ಲಿ ಲಭ್ಯವಿಲ್ಲದಿದ್ದಲ್ಲೀ ಸರ್ಕಾರಿ ಆಸ್ಪತ್ರೆಯ ಶಿಫಾರಸ್ಸಿನೊಂದಿಗೆ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಳ್ಳ ಬಹುದಾಗಿದೆ ಬೆಂಗಳೂರು, “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಟ್ರಸ್ಟಿನ ಆರೋಗ್ಯ ತಜ್ಞ ಡಾ. ಮಂಜುನಾಥ್ ತಿಳಿಸಿದರು.

ಸಭೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್ ಜಿಲ್ಲಾ ಪಂಚಾಯತ್ ಸದಸ್ಯರು ಸ್ಥಾಯಿ ಸಮಿತಿ ಅಧ್ಯಕ್ಷರು, ಜನಾರ್ಧನ ಗೌಡ, ಅನಿತ ಹಾಗೂ ಖಾಸಾಗಿ ವೈದ್ಯಕೀಯ ಆಸ್ಪತ್ರೆಗಳ ಮುಖ್ಯಸ್ಥರು, ಅಧಿಕಾರಿಗಳು ಉಪಸ್ಥಿತರಿದ್ದರು.


Spread the love