Home Mangalorean News Kannada News ಆಳ್ವಾಸ್ ಕಾಲೇಜಿನ ಮೈಕ್ರೋ ಬಯಾಲಜಿ ವಿಭಾಗದಿಂದ  ಬ್ಲೆಡ್ ಗ್ರೂಪಿಂಗ್ ಕ್ಯಾಂಪ್

ಆಳ್ವಾಸ್ ಕಾಲೇಜಿನ ಮೈಕ್ರೋ ಬಯಾಲಜಿ ವಿಭಾಗದಿಂದ  ಬ್ಲೆಡ್ ಗ್ರೂಪಿಂಗ್ ಕ್ಯಾಂಪ್

Spread the love

ಆಳ್ವಾಸ್ ಕಾಲೇಜಿನ ಮೈಕ್ರೋ ಬಯಾಲಜಿ ವಿಭಾಗದಿಂದ  ಬ್ಲೆಡ್ ಗ್ರೂಪಿಂಗ್ ಕ್ಯಾಂಪ್

ವಿದ್ಯಾಗಿರಿ: ರಕ್ತದಾನ ಮಾಡುವ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಳ್ಳಿ ಎಂದು ಆಳ್ವಾಸ್ ಆಯುರ್ವೇದ ಕಾಲೇಜಿನ ಶರೀರಕ್ರಿಯಾ ವಿಭಾಗದ ಮುಖ್ಯಸ್ಥ ಡಾ ಕೆ.ಎನ್ ರಾಜಶೇಖರ ಹೇಳಿದರು.

ಆಳ್ವಾಸ್ ಕಾಲೇಜಿನ ಮೈಕ್ರೋ ಬಯಾಲಜಿ ವಿಭಾಗದಿಂದ ಆಯೋಜಿಸಲಾಗಿದ್ದ ಬ್ಲೆಡ್ ಗ್ರೂಪ್ ಕ್ಯಾಂಪ್ ಕಾರ್ಯಕ್ರಮವನ್ನು ಕುವೆಂಪು ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ರಕ್ತದ ಗುಂಪಿನ ಬಗ್ಗೆ ಅರಿತಿರಬೇಕು. ರಕ್ತದಾನ ಮಾಡುವುದರಿಂದ ನಿಮ್ಮ ಆರೋಗ್ಯ ವೃದ್ದಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸೈನ್ಸ್ ವಿಭಾಗದ ಡೀನ್ ರಮ್ಯ ರೈ ಪಿ.ಡಿ ಮಾತನಾಡಿ ಸತತ 16 ವರ್ಷಗಳಿಂದ ರಕ್ತದಾನ ಶಿಬಿರ ನಡೆಯುತ್ತಿದ್ದು ವಿದ್ಯಾರ್ಥಿಗಳು ಸ್ವಇಚ್ಛೆಯಿಂದ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡು ರಕ್ತದಾನ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಕಾಲೇಜಿನ ಆಡಳಿತ ಅಧಿಕಾರಿ ಪ್ರೋ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ತುರ್ತು ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇದ್ದಾಗ ಮಾತ್ರ ರಕ್ತದಾನ ಮಾಡಬೇಡಿ, ನಿಮ್ಮ ದೇಹದ ಆರೋಗ್ಯಕ್ಕೆ ತಕ್ಕಂತೆ ವೈದ್ಯರ ಸಲಹೆಯ ಮೇರೆಗೆ ರಕ್ತದಾನ ಮಾಡುವ ಹವ್ಯಾಸ ಬೆಳೆಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರಾದ ಮೈಕ್ರೋಬಯೋಲಜಿ ವಿಭಾಗದ ಮುಖ್ಯಸ್ಥೆ ರಮ್ಯ ರೈ ಉಪಸ್ಥಿತರಿದ್ದರು. ವಿದ್ಯಾರ್ಥಿ ನಿಕಿತಾ ನಿರೂಪಿಸಿ, ಸುದರ್ಶನ ಸ್ವಾಗತಿಸಿ, ಶ್ರದ್ಧಾ ವಂದಿಸಿದರು.


Spread the love

Exit mobile version