ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಮಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮೊದಲ ಬಾರಿಗೆ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದ್ದು, ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಮಂಗಳೂರು ನಿವಾಸಕ್ಕೆ ಭೇಟಿ ನೀಡಿದರು.
ಆಸ್ಕರ್ ಫೆರ್ನಾಂಡಿಸ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್ ಅವರು ಆಸ್ಕರ್ ಅವರ ಆರೋಗ್ಯ ವಿಚಾರಿಸಿದರು.
ಈ ವೇಳೆ ಬ್ಲಾಸಂ ಫೆರ್ನಾಂಡೀಸ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹಾಗೂ ಇತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಅನಾರೋಗ್ಯದ ಕಾರಣದಿಂದ ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಆಸ್ಕರ್ ಫೆರ್ನಾಂಡಿಸ್ ಅವರು ಪಾಲ್ಗೊಂಡಿರಲಿಲ್ಲ.