ಇಂದ್ರಾಳಿ ಮೇಲ್ಸೇತುವೆ ಅಂತಿಮ ಘಟ್ಟದ ಕಾಮಗಾರಿ ತ್ವರಿತವಾಗಿ ಕೈಗೊಳ್ಳಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Spread the love

ಇಂದ್ರಾಳಿ ಮೇಲ್ಸೇತುವೆ ಅಂತಿಮ ಘಟ್ಟದ ಕಾಮಗಾರಿ ತ್ವರಿತವಾಗಿ ಕೈಗೊಳ್ಳಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಅಂತಿಮ ಘಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಇಂದು ರಾಷ್ಟಿಯ ಹೆದ್ದಾರಿ 169 ಎ ರ ಉಡುಪಿ ನಗರ ಹಾಗೂ ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿ ಮಾತನಾಡುತ್ತಿದ್ದರು.

ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈಲ್ವೆ ಇಲಾಖೆಯ ವತಿಯಿಂದ ವೆಲ್ಡಿಂಗ್ ಕಾರ್ಯದ ಗುಣಮಟ್ಟವನ್ನು ಸ್ಥಳೀಯವಾಗಿ ಇನ್ಸ್ಪೆಕ್ಷನ್ ನಡೆಸಲಾಗಿದೆ. ಅಂತಿಮವಾಗಿ ರೈಲ್ವೇ ಡಿಸೈನ್ ಮತ್ತು ಸೇಫ್ಟಿ ಆರ್ಗನೈಸೇಷನ್ ಲಕ್ನೋ ಅವರಿಂದ ತ್ವರಿತವಾಗಿ ಕೈಗೊಳ್ಳಬೇಕು ಎಂದರು.

ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ಅನ್ನು ಅಳವಡಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳುವುದರೊಂದಿಗೆ ರೈಲ್ವೇ ಇಲಾಖೆಯ ವತಿಯಿಂದ ನಿಗಧಿಪಡಿಸುವ ದಿನಾಂಕದAದು ರೈಲ್ವೇ ಸಂಚಾರವನ್ನು ಸ್ಥಗಿತಗೊಳಿಸಿ, ಅಳವಡಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದರು.

ಗರ್ಡಲ್ಸ್ ಅನ್ನು ರೈಲ್ವೇ ಮೇಲ್ಸೇತುವೆಯಾಗಿ ಅಳವಡಿಸಲು ಅಗತ್ಯವಿರುವ ಬೃಹತ್ ಕ್ರೆನ್ಗಳು, ಜಾಕ್ಗಳು, ರೋಲರ್ಗಳು, ರೇಲ್ಸ್ಗಳು ಸೇರಿದಂತೆ ಮತ್ತಿತರ ಅವಶ್ಯವಿರುವ ಸಾಧನಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು ಎಂದ ಅವರು, ಈ ಕಾಮಗಾರಿಯ ಸಂದರ್ಭದಲ್ಲಿ ಸುರಕ್ಷಿತವಾಗಿ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಕೊಂಕಣ ರೈಲ್ವೆಯ ಸೀನೀಯರ್ ಇಂಜಿನಿಯರ್ ಗೋಪಾಲ ಕೃಷ್ಣ, ಲೋಕೋಪಯೋಗಿ ಇಲಾಖೆಯ ಎ.ಇ ಮಂಜುನಾಥ್, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments