ಇತರರನ್ನು ಗೌರವದಿಂದ ಕಾಣುವುದು ಮಾನವ ಹಕ್ಕು ರಕ್ಷಣೆ : ಸುರೇಂದ್ರನಾಥ ಶೆಟ್ಟಿ
ಉಡುಪಿ : ಸಮಾಜದಲ್ಲಿ ಮನುಷ್ಯ ಮನುಷ್ಯರ ನಡುವೆ ತಾರತಮ್ಯವಿಲ್ಲದೆ ಮನುಷ್ಯನನ್ನು ಮನುಷ್ಯರಾಗಿ ನೋಡುವುದು; ತನ್ನಂತೆ ಇತರರನ್ನು ಗೌರವದಿಂದ ಕಾಣುವುದು ಮಾನವ ಹಕ್ಕುಗಳ ನಿಜವಾದ ರಕ್ಷಣೆ. ಎಲ್ಲಾ ಧರ್ಮಗಳಿಂತಲೂ ಮಾನವ ಧರ್ಮ ಮಿಗಿಲು. ಮಾನವನಿಗೆ ಬಾಹ್ಯ ಸೌಂದರ್ಯಕ್ಕಿಂತ ಹೃದಯ ಸೌಂದರ್ಯ ಮುಖ್ಯ. ಮಾನವ ಹಕ್ಕುಗಳ ರಕ್ಷಣೆಯನ್ನು ಆರ್ಥಿಕ, ಸಾಮಾಜಿಕ, ರಾಜಕೀಯ, ಸಾಂಸ್ಕøತಿಕ ಆಯಾಮಗಳ ಮೂಲಕ ವಿಶ್ಲೇಷಿಸಬೇಕು ಎಂದು ಎಂ.ಜಿ.ಎಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರೊ. ಸುರೇಂದ್ರನಾಥ ಶೆಟ್ಟಿ ಕೊಕ್ಕರ್ಣೆ ಇವರು ಹೇಳಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ “ವಿಶ್ವಮಾನವ ಹಕ್ಕುಗಳ” ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ವಹಿಸಿದ್ದರು. ಮಾನವ ಹಕ್ಕುಗಳ ಸಂಘದ ಸಂಚಾಲಕರಾದ ಡಾ. ನಿಕೇತನಾ ಇವರು ಸ್ವಾಗತಿಸಿ ಪ್ರಸ್ತಾವನೆಯ ಮಾತುಗಳನ್ನಾಡಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವೆಂಕಟೇಶ ಹೆಚ್.ಕೆ. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಚಂದನಾ ಪ್ರಾರ್ಥಿಸಿ, ಉಪನ್ಯಾಸಕಿ ಶಾಲಿನಿ ದಿನೇಶ್ ವಂದಿಸಿದರು.