ಉಡುಪಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದ ಸಚಿವ ಪ್ರಮೋದ್ ಮಧ್ವರಾಜ್
ಉಡುಪಿ: ಜಿಲ್ಲಾಡಳಿತ, ಉಡುಪಿ ವತಿಯಿಂದ ಜಿಲ್ಲಾ ಮಟ್ಟದ ಗಣ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವು ಬೀಡಿನಗುಡ್ಡೆಯ ಮಹಾತ್ಮ ಗಾಂಧೀ ಬಯಲು ರಂಗ ಮಂದಿರದಲ್ಲಿ ಗುರುವಾರ ನಡೆಯಿತು.
ಕಾರ್ಯಕ್ರಮದಲ್ಲಿ ದ್ವಜಾರೋಹಣೆ ನೆರವೇರಿಸಿದ ರಾಜ್ಯದ ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಗಣ ರಾಜ್ಯೋತ್ಸವದ ಸಂದೇಶ ನೀಡಿದರು.
ಜಿಲ್ಲಾಡಳಿತದ ವತಿಯಿಂದ 5 ಮಂದಿಗೆ ಸರಕಾರಿ ನೌಕರರಿಗೆ ಸವೋತ್ತಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಸಾದನೆ ಮಾಡಿದ 6 ವಿದ್ಯಾಥಿಗಳಿಗೆ ಸನ್ಮಾನ, ಆರೋಗ್ಯ ಇಲಾಖೆ ವತಿಯಿಂದ ವಿಶುಶೆಟ್ಟಿ ಅಂಬಲಪಾಡಿ ಇವರಿಗೆ ಹರೀಶ್ ಸಾಂತ್ವನ ಜೀವ ರಕ್ಷಕ ಪ್ರಶಸ್ತಿ , ರಾಷ್ಟ್ರಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಸಾವಱಜನಿಕ ಶಿಕ್ಷಣ ಇಲಾಖೆವತಿಯಿಂದ 6 ಮಂದಿಗೆ ನಗದು ಪುರಸ್ಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಅಸಾಧಾರಣ ಪ್ರತಿಭೆಯುಳ್ಳ 10 ಮಕ್ಕಳಿಗೆ 10000 ಗಳ ನಗದು ಪುರಸ್ಕಾರ, ಸಮೃದ್ಧಿ ಮಹಿಳಾ ಮಂಡಳಿ ಪೇತ್ರಿ, ಇವರಿಗೆ ಸನ್ಮಾನ ನಡೆಯಿತು.
ಮುಕುಂದ ಕೃಪ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಮಮ ಪ್ರೌಢಶಾಲೆ ಉದ್ಯಾವರ, ಕ್ರಿಶ್ಚಿಯನ್ ಪ್ರೌಢಶಾಲೆ, ಸೈಂಟ್ ಸಿಸಿಲಿಸ್ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ, ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ. ಬಾಲಕೃಷ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಅನುರಾಧ , ತಹಸೀಲ್ದಾರ್ ಮಹೇಶ್ಚಂದ್ರ, ಪೌರಾಯುಕ್ತ ಮಂಜುನಾಥಯ್ಯ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಯೋಗೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.