ಉಡುಪಿ ಕನಕದಾಸರ ಕರ್ಮಭೂಮಿ- ಸಚಿವ ಪ್ರಮೋದ್ ಮಧ್ವರಾಜ್
ಉಡುಪಿ; ಕನಕರಿಗೂ ಉಡುಪಿಗೂ ಇರುವ ಸಂಬಂಧದಿಂದಾಗಿ ಉಡುಪಿಯಲ್ಲಿ ಆಚರಿಸುವ ಕನಕಜಯಂತಿಗೆ ಅದರದ್ದೇ ಆದ ಮಹತ್ವ ಎಂದು ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಅವರು ಗುರುವಾರ ಉಡುಪಿಯ ಗೋವಿಂದ ಕಲ್ಯಾಣಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಶ್ರೀ ಕನಕದಾಸರ ಜಯಂತಿ ಆಚರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಜಾತಿಯ ಎಲ್ಲೆ ಮೀರಿ ನಿಂತ ಕನಕ ವಾದಿರಾಜರ ಸಮಕಾಲೀನರು. ಕನಕದಾಸರು ಮತ್ತು ಉಡುಪಿಗೆ ನಿಟಕವಾದ ಸಂಬಂದ ಇದೆ, ಶ್ರೀಕೃಷ್ಣನ ಪರಮ ಭಕ್ತರಾಗಿದ್ದ ಅವರು, ಉಡುಪಿಯಲ್ಲಿ ಶ್ರೀ ಕೃಷ್ಣ ನೆಲಿಸಿದ್ದಾನೆ ಎಂಬ ಕಾರಣದಿಂದ ಉಡುಪಿಯನ್ನು ತಮ್ಮ ಕರ್ಮಭೂಮಿಯನ್ನಾಗಿ ಆಯ್ಕೆ ಮಾಡಿದ್ದರು, ಅಂತಹ ಮಹಾನುಭಾವರ ಕರ್ಮಭೂಮಿಯಗಿದ್ದ ಕಾರಣ ಉಡುಪಿ ಇಂದು ಹಲವು ಕ್ಷೇತ್ರದಲ್ಲಿ ದೇಶದಲ್ಲಿಯೇ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದರು. ಕನಕದಾಸರು ತಮ್ಮ ಸಾಹಿತ್ಯ ಮತ್ತು ಕೀರ್ತನೆಗಳಲ್ಲಿ ನೀಡಿರುವ ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದ “ ಸಂತಕವಿ ಕನಕದಾಸರು “ ಕಿರು ಪುಸ್ತಕವನ್ನು ಸಚಿವರು ಬಿಡುಗೊಡೆಗೊಳಿಸಿದರು.
ಕನಕದಾಸರ ಜಯಂತಿ ಪ್ರಯುಕ್ತ ಉಡುಪಿ ಡಯೆಟ್ ನಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸಚಿವರು ಬಹುಮಾನ ವಿತರಿಸಿದರು.
ಕನಕದಾಸರ ಕುರಿತು ಮಂಗಳೂರು ವಿವಿಯ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ.ಬಿ.ಶಿವರಾಮ ಶೆಟ್ಟಿ ಮಾತನಾಡಿದರು ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹಮೂರ್ತಿ, ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನಳನಿ ಪ್ರದೀಪ್ ರಾವ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಓ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ, ತಹಸೀಲ್ದಾರ್ ಮಹೇಶ್ಚಂದ್ರ, ಕನಕದಾಸ ಸಮಾಜದ ಮೇಟಿ ಮುದಿಯಪ್ಪ ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಅನುರಾಧ ಸ್ವಾಗತಿಸಿದರು, ಪೌರಾಯುಕ್ತ ಮುಂಜುನಾಥಯ್ಯ ವಂದಿಸಿದರು. ಪ್ರಶಾಂತ್ ಹಾವಂಜೆ ಮತ್ತು ಭಾಗವತ್ ನಿರೂಪಿಸಿದರು. ಯೋಗೇಶ್ ಕಿಣಿ ಮತ್ತು ಬಳಗದವರಿಂದ ಕನಕದಾಸರ ಕುರಿತು ಗೀತ ಗಾಯನ ಕಾರ್ಯಕ್ರಮ ನಡೆಯಿತು.