ಉಡುಪಿ: ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ, ಶಿವಮೊಗ್ಗ , ಭಾರತೀಯ ಕೃಷಿ ಅನುಸಂದಾನ ಪರಿಷತ್, ನವದೆಹಲಿ , ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ, ಉಡುಪಿ , ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ, ಬ್ರಹ್ಮಾವರ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಕುಂದಾಪುರ, ಉಡುಪಿ. ಕೃಷಿ, ತೋಟಗಾರಿಕೆ ಮತ್ತು ಅರಣ್ಯ ಇಲಾಖೆ, ಉಡುಪಿ, ಭಾರತೀಯ ಕಿಸಾನ್ ಸಂಘ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಹಲಸಿನ ಹಬ್ಬ-2015 ನ್ನು ಜೂನ್ 13 ಮತ್ತು 14 ರಂದು ಬೆಳಗ್ಗೆ 11.00 ಗಂಟೆಗೆ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪ ಕುಂದಾಪುರ, ಉಡುಪಿ ಜಿಲ್ಲೆ ಇಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯ ಕುಮಾರ್ ಸೊರಕೆ ಇವರು ನೆರವೇರಿಸುವರು. ಅಧ್ಯಕ್ಷತೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ ಪೂಜಾರಿ ವಹಿಸುವರು.
ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆ , ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸವಿತಾ ಶಿವಾನಂದ ಕೋಟ್ಯಾನ್ ಹಾಗೂ ಮತ್ತಿತ್ತರ ಗಣ್ಯರು ಭಾಗವಹಿಸುವರು.