ಉಡುಪಿ: ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಚಾಲನೆ

Spread the love

ಉಡುಪಿ: ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಚಾಲನೆ

ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಮೂಡಿಸುವ ಎಲ್ಇಡಿ ವಾಹನಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹಸಿರು ನಿಶಾನೆ ತೋರಿದರು.

ಬಳಿಕ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳು ರಾಜ್ಯದ ದೀನ ದಲಿತರ ಹಾಗೂ ಜನಸಾಮಾನ್ಯರ ಜೀವನವನ್ನು ಬೆಳಗಿಸುತ್ತ ಬಂದಿದೆ. ಈ ಯೋಜನಗಳು ಇನ್ನಷ್ಟು ಸಮರ್ಪಕವಾಗಿ ಜನಸಾಮಾನ್ಯರನ್ನು ತಲುಪಿಸಬೇಕೆಂಬ ಸರ್ಕಾರದ ಆಶಯವಾಗಿದ್ದು ಪಂಚ ಗ್ಯಾರಂಟಿ ಯೋಜನೆಗಳ ಸವಲತ್ತಿನ ಬಗ್ಗೆ ಜನಜಾಗೃತಿ ವಾಹನ ಜಾಥಾವು ರಾಜ್ಯಾದ್ಯಂತ ಸಂಚರಿಸುತ್ತಿದ್ದು ಈ ವಾಹನ ಜಾಥಾದಿಂದ ಜನಸಾಮಾನ್ಯರು ಇನ್ನಷ್ಟು ಉಪಯೋಗವನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳು, ಕಾರ್ಯಕ್ರಮಗಳನ್ನು ಎಲ್ಇಡಿ ಪರದೆ ಮೂಲಕ ಸಂಚಾರಿ ವಾಹನದಲ್ಲಿ ಪ್ರದರ್ಶನ ನೀಡುವ ವಾಹನವು ಜಿಲ್ಲೆಯಾದ್ಯಂತ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸಲಿದೆ.


Spread the love
Subscribe
Notify of

0 Comments
Inline Feedbacks
View all comments