ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ

Beautifully crafted traditional Indian gold jewellery for women. The ornaments are known as bangles worn to hands and made up of 22 carat gold.
Spread the love

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ
 

ಉಡುಪಿ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ವಂಚಿಸಿರುವ ಘಟನೆ ಉಡುಪಿಯಲ್ಲಿ ಫೆ.18ರಂದು ನಡೆದಿದೆ.

ಉಡುಪಿ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ ಎಂಬವರ ಮಾರುತಿ ಜುವೆಲ್ಲರಿಗೆ ಅಂದಾಜು 35ರಿಂದ 45ವರ್ಷ ಪ್ರಾಯದ ಮೂವರು ಬುರ್ಖಧಾರಿ ಮಹಿಳೆಯರು ಗ್ರಾಹಕರಂತೆ ಅಂಗಡಿಗೆ ಬಂದು, 15.800 ಗ್ರಾಂ ತೂಕದ ಒಂದು ಚಿನ್ನದ ಚೈನ್ ಮತ್ತು 10.150 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್ ಖರೀದಿಸಿದರು.

ಇದಕ್ಕೆ ಬದಲಾಗಿ ಮಹಿಳೆಯರು ತಮ್ಮ ಬಳಿ ಇದ್ದ ಹಳೆಯ 31.490 ಗ್ರಾಂ ತೂಕದ ಒಂದು ನೆಕ್ಲೇಸ್ ಮತ್ತು 10.940 ಗ್ರಾಂ ತೂಕದ ಬೆಂಡೋಲೆಗೆ ಹಾಕುವ ಜುಮುಕಿ ನೀಡಿದ್ದಾರೆನ್ನಲಾಗಿದೆ.

ಇದರಲ್ಲಿ 48,771ರೂ. ಉಳಿಕೆ ಹಣದ ಪೈಕಿ 19,000ರೂ. ಹಣವನ್ನು ನಗದಾಗಿ ಪಡೆದುಕೊಂಡು ಅಂಗಡಿಯಿಂದ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ವ್ಯವಹಾರದ ಸಮಯ ಚೌಕಾಸಿ ಮಾಡಿದ ಮಹಿಳೆಯರು ನಿತ್ಯಾನಂದ ಅವರ ಗಮನವನ್ನು ಬೇರೆಡೆಗೆ ಸೆಳೆದು, ಪರೀಕ್ಷಿಸಲು ನೀಡಿದ್ದ ಅಸಲಿ ಚಿನ್ನದ ಬದಲಿಗೆ ನಕಲಿ ಚಿನ್ನದ ಆಭರಣಗಳನ್ನು ನೀಡಿ 1,98,923ರೂ. ಮೌಲ್ಯದ ಅಸಲಿ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿ ವಂಚಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love