Spread the love
ಉಡುಪಿ ಜಿಲ್ಲಾ ಎನ್.ಎಸ್.ಯು.ಐ. ಉಸ್ತುವಾರಿಗಳಾಗಿ ದಿನೇಶ್ ಪುತ್ರನ್ ಮತ್ತು ಹರೀಶ್ ಕಿಣಿ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಎನ್.ಎಸ್.ಯು.ಐ ಸಂಘಟನೆಯನ್ನು ಚುರುಕುಗೊಳಿಸುವಂತೆ ರಾಷ್ಟ್ರೀಯ ಎನ್.ಎಸ್.ಯು.ಐ. ಉಸ್ತುವಾರಿ, ರಾಜ್ಯಸಭಾ ಸದಸ್ಯ ಹಾಗೂ ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಓಸ್ಕರ್ ಫೆರ್ನಾಂಡಿಸ್ರವರ ಸೂಚನೆಯ ಮೇರೆಗೆ ಕಾಂಗ್ರೆಸ್ ಮುಖಂಡರುಗಳಾದ ಜಿಲ್ಲಾ ಎನ್.ಎಸ್.ಯು.ಐ ಮಾಜಿ ಅಧ್ಯಕ್ಷ ದಿನೇಶ್ ಪುತ್ರನ್ ಮತ್ತು ಸರ್ವ ಕಾಲೇಜ್ ವಿದ್ಯಾರ್ಥಿ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಅಲೆವೂರು ಹರೀಶ್ ಕಿಣಿ ಇವರನ್ನು ಉಡುಪಿ ಜಿಲ್ಲಾ ಎನ್.ಎಸ್.ಯು.ಐ. ನ ಉಸ್ತುವಾರಿಗಳಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಗೋಪಾಲ ಪೂಜಾರಿಯವರು ನೇಮಿಸಿದ್ದಾರೆ.
ಇತ್ತೀಚೆಗೆ ಓಸ್ಕರ್ ಫೆರ್ನಾಂಡಿಸ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರುಗಳ ಸಭೆಯಲ್ಲಿ ಈ ನೇಮಕಾತಿ ನಡೆದಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the love